ಪರಿಕ್ಕರ್ ಆರೋಗ್ಯದಲ್ಲಿ ಚೇತರಿಕೆ: ಏಪ್ರಿಲ್ ನಲ್ಲಿ ಭಾರತಕ್ಕೆ ಮರಳುವ ಸಾಧ್ಯತೆ

ಪ್ಯಾಂಕ್ರಿಯಾಟೈಸಿಸ್‌ ಸಮಸ್ಯೆಯಿಂದಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು. ಏಪ್ರಿಲ್ ತಿಂಗಳಲ್ಲಿ ಭಾರತಕ್ಕೆ ವಾಪಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಪಣಜಿ: ಪ್ಯಾಂಕ್ರಿಯಾಟೈಸಿಸ್‌ ಸಮಸ್ಯೆಯಿಂದಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು. ಏಪ್ರಿಲ್ ತಿಂಗಳಲ್ಲಿ ಭಾರತಕ್ಕೆ ವಾಪಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮೂಲಗಳ ಪ್ರಕಾರ ಮನೋಹರ್‌ ಪರಿಕ್ಕರ್‌ ಅಮೆರಿಕದಲ್ಲಿ ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ಏಪ್ರಿಲ್‌ 2ನೇ ವಾರದಲ್ಲಿ ದೇಶಕ್ಕೆ ವಾಪಸ್‌ ಆಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಜೆಪಿ ಹಿರಿಯ ಮುಖಂಡರೊಬ್ಬರು ಸದ್ಯ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಇನ್ನೂ 15 ದಿನ ಚಿಕಿತ್ಸೆ ಮುಂದುವರಿಯಲಿದೆ. ಹಾಗಾಗಿ ಏಪ್ರಿಲ್‌ 2ನೇ ವಾರದಲ್ಲಿ ದೇಶಕ್ಕೆ ಮರಳು ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಅಮೆರಿಕದಿಂದ ವಾಪಸ್ ಆದ ಬಳಿಕ ಪರಿಕ್ಕರ್ ಅವರು, ಅಲ್ಲಿಂದ ಬಂದ ಬಳಿಕ ಮತ್ತೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದ್ದಾರೆ.
ಪ್ಯಾಂಕ್ರಿಯಾಟೈಸಿಸ್‌ (ಮೇದೋಜೀರಕ ಗ್ರಂಥಿ) ತೊಂದರೆಯಿಂದ ಬಳಲುತ್ತಿರುವ ಪರಿಕ್ಕರ್ ಆರಂಭದ ಕೆಲವು ದಿನಗಳು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ನಡುವೆ ಆಸ್ಪತ್ರೆಯಿಂದ ಬಿಡುಗಡೆ ಪಡೆದು ಫೆಬ್ರುವರಿ 21ರಂದು ರಾಜ್ಯ ಬಜೆಟ್‌ ಮಂಡಿಸಿದ್ದರು. ಕೆಲದಿನಗಳ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆದಿದ್ದ ಅವರು ಗೋವಾ ಮೆಡಿಕಲ್‌ ಆಸ್ಪತ್ರೆಯಲ್ಲಿಯೂ ಕೆಲಕಾಲ ಚಿಕಿತ್ಸೆ ಪಡೆದಿದ್ದರು. ಮಾರ್ಚ್‌ 5ರಂದು ಮತ್ತೆ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ರವಾನೆ ಮಾಡಲಾಗಿತ್ತು. 
ಗೋವಾದಿಂದ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಹಿರಿಯ ಸಚಿವರೊಂದಿಗೆ ಸಭೆ ನಡೆಸಿದ್ದ ಪರಿಕ್ಕರ್, ತಮ್ಮ ಅನುಪಸ್ಥಿತಿಯಲ್ಲಿ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಲು ಸಹಕಾರಿಯಾಗಲೆಂದು ಸಂಪುಟ ಸಲಹಾ ಸಮಿತಿ ರಚಿಸಿದ್ದರು. ಬಳಿಕ ಅಮೆರಿಕಕ್ಕೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com