ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ...
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
ವಿಜಯವಾಡ: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು, ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಭಾನುವಾರ ಆರೋಪಿಸಿದ್ದಾರೆ.
ಇಂದು ವಿಜಯವಾಡಲ್ಲಿ ಯುಗಾದಿ(ತೆಲುಗು ಹೊಸ ವರ್ಷ) ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಆಂಧ್ರ ಸಿಎಂ, ನಾನು ಸಹ ಈ ದೇಶದ ಒಬ್ಬ ಹಿರಿಯ ನಾಯಕ. ಆದರೂ ನಾನು ಅಹಂಕಾರ ತೋರಿಸದೆ ವಿನಯಪೂರ್ವಕವಾಗಿ ರಾಜ್ಯಕ್ಕೆ ಅನುದಾನ ನೀಡಿ ಎಂದು ಕೇಳಿಕೊಂಡೆ. ಆದರೆ ಕೇಂದ್ರ ಸರ್ಕಾರ ಅನುದಾನ ನೀಡದೆ ನಮಗೆ ಅನ್ಯಾಯ ಮಾಡಿದೆ ಎಂದು ದೂರಿದರು.
ನಿನ್ನೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದ ನಾಯ್ಡು, ಆಂಧ್ರ ಪ್ರದೇಶ ವಿಭಜನೆ ಸಂದರ್ಭದಲ್ಲಿ ಯುಪಿಎ ದಿಂದ ಆಂಧ್ರ ಪ್ರದೇಶ ಜನರಿಗೆ ಆದ ಆದ ಅನ್ಯಾಯವನ್ನು ನೀವು ಸರಿಪಡಿಸಬಹುದು ಎಂಬ ನಿರೀಕ್ಷೆಯಿಂದ ಟಿಡಿಪಿ ,ಎನ್ ಡಿಎ ಮೈತ್ರಿಕೂಟವನ್ನು ಸೇರಿತ್ತು. ಆದರೆ ಮೈತ್ರಿಯಲ್ಲಿ ಮುಂದುವರಿಯುವುದರಲ್ಲಿ ಯಾವುದೇ ಅರ್ಥ ಮತ್ತು ಉದ್ದೇಶ ಈಡೇರುವುದಿಲ್ಲ ಎಂದು ಗೊತ್ತಾದ ಮೇಲೆ ಹೊರಬರಲು ನಿರ್ಧರಿಸಿತು ಎಂದು ಹೇಳಿದ್ದಾರೆ.
2014ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸದಿದ್ದರಿಂದ ಇತ್ತೀಚಿಗೆ ಟಿಡಿಪಿ ಎನ್ ಮೈತ್ರಿಕೂಟದಿಂದ ಹೊರ ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com