ಸೋತವರ ಹತಾಶೆಯ ನುಡಿಯಂತಿದೆ : ರಾಹುಲ್ ಹೇಳಿಕೆಗೆ ನಿರ್ಮಲಾ ತಿರುಗೇಟು

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ 84 ನೇ ಅಧಿವೇಶನ್ನುದ್ದೇಶಿಸಿ ಮಾಡಿದ ಭಾಷಣಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Updated on: 

ನವದೆಹಲಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ  ಪಕ್ಷದ 84 ನೇ ಅಧಿವೇಶನ್ನುದ್ದೇಶಿಸಿ ಮಾಡಿದ ಭಾಷಣಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ.

ಅಧಿಕಾರದ ದಾಹಕ್ಕಾಗಿ ಬಿಜೆಪಿಯನ್ನು ಕೌರವರಿಗೆ ಹೋಲಿಸಿರುವ ಕಾಂಗ್ರೆಸ್,  ಪಾಂಡವರಂತೆ  ನ್ಯಾಯಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿರುವುದು  ಸೋತವರ ಹತಾಶೆಯ ನುಡಿಯಂತಿದೆ ಎಂದು ನಿರ್ಮಲಾ ಸೀತಾರಾಮನ್ ಟೀಕಿಸಿದ್ದಾರೆ.

ಪಾಂಡವರಂತೆ ಗುರುತಿಸಿಕೊಳ್ಳಲು ಇಚ್ಚಿಸಿಕೊಳ್ಳುವ ಕಾಂಗ್ರೆಸ್ ರಾಮನ ಅಸ್ತಿತ್ವವನ್ನೇ ಪ್ರಶ್ನಿಸುತ್ತದೆ. ಹಿಂದೂ ಸಮುದಾಯ ಹಾಗೂ ಆಚರಣೆಗಳನ್ನು ವಿರೋಧಿಸುತ್ತದೆ ಎಂದರು.

ಇದಕ್ಕೂ ಮುನ್ನ ಹೇಳಿಕೆ ನೀಡಿದ ರಾಹುಲ್ ಗಾಂಧಿ, ಬಿಜೆಪಿ ಹಾಗೂ ಆರ್ ಎಸ್ ಎಸ್ ಕುರುಕ್ಷೇತ್ರದಲ್ಲಿನ ಕೌರವರ ರೀತಿಯಲ್ಲಿದ್ದು, ಕಾಂಗ್ರೆಸ್ ಪಾಂಡವರ ರೀತಿಯಲ್ಲಿ ಸತ್ಯ ಹಾಗೂ ನ್ಯಾಯಯುತವಾಗಿ ಹೋರಾಟ ಮಾಡುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com