ದೇಶ

ಲೋಕಪಾಲ್, ರೈತರಿಗೆ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಧಾನಿ ಮೋದಿ ವಿಫಲ: ಅಣ್ಣಾ ಹಜಾರೆ

ಲೋಕಪಾಲ್, ರೈತರಿಗೆ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಧಾನಿ ಮೋದಿ ವಿಫಲ: ಅಣ್ಣಾ ಹಜಾರೆ
ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ
Published On :
ಪಾಟ್ನ: ಲೋಕಪಾಲ್ ಮಸೂದೆ ಜಾರಿಗೆ ತರುವಲ್ಲಿ ಹಾಗೂ ರೈತರಿಗೆ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಫಲರಾಗಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಭಾನುವಾರ ಹೇಳಿದ್ದಾರೆ. 
ಬಿಹಾರ ರಾಜ್ಯದ ಖಗಾಡಿಯಾದಲ್ಲಿ ನಡೆದ ರೈತರ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ. 
ಲೋಕಪಾಲ್ ಮಸೂದೆ ಜಾರಿ ಹಾಗೂ ರೈತರ ಪರವಾಗಿ ಕುರಿತ ನನ್ನ ಹೋರಾಟವನ್ನು ಮುಂದುವರೆಸುತ್ತೇನೆ. ರೈತರು ಇಂದು ಎದುರಿಸುತ್ತಿರುವ ಸಮಸ್ಯೆಗಳನ್ನು ಹಿಡಿದು ರಾಜಧಾನಿ ದೆಹಲಿಯಲ್ಲಿ ಮಾ.23ರಿಂದ ಸತ್ಯಾಗ್ರಹ ನಡೆಸುತ್ತೇನೆ. ಕಳೆದ ಮೂರು ವರ್ಷಗಳಿಂದ ಈ ವಿಚಾರಗಳ ಕುರಿತಂತೆ ನಾನು ಮೌನವಾಗಿದ್ದೆ. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜೊತೆಗೆ ಮಾತುಕತೆ ನಡೆಸಲು ಯತ್ನ ನಡೆಸುತ್ತಲೇ ಇದ್ದೇನೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಪ್ರಧಾನಿ ಮೋದಿಯವರಿಗೆ ಈವರೆಗೂ 21 ಪತ್ರಗಳನ್ನು ಬರೆದಿದ್ದೇನೆ. ಆದರೆ, ಯಾವುದಕ್ಕೂ ಪ್ರತಿಕ್ರಿಯೆಗಳು ಬಂದಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.