ಯಾವುದೇ ವಿಚಾರದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧ; ರಾಜನಾಥ್ ಸಿಂಗ್

ಯಾವುದೇ ವಿಚಾರದ ಬಗ್ಗೆ, ಯಾವುದೇ ಸದಸ್ಯರೊಂದಿಗಾದರೂ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ...
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್
ನವದೆಹಲಿ; ಯಾವುದೇ ವಿಚಾರದ ಬಗ್ಗೆ, ಯಾವುದೇ ಸದಸ್ಯರೊಂದಿಗಾದರೂ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. 
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್'ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಉಭಯ ಸದನಗಳಲ್ಲಿ ತೀವ್ರ ಗದ್ದಲ ಉಂಟಾಗಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಯಾವುದೇ ಸದಸ್ಯರು ಹಾಗೂ ಯಾವುದೇ ವಿಚಾರದ ಬಗ್ಗೆ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆಂದು ಹೇಳಿದ್ದಾರೆ. 
ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ಚರ್ಚೆ ನಡೆಯುವ ಅಗತ್ಯವಿದೆ. ಚರ್ಚೆಗೆ ಅವಕಾಶ ನೀಡಲು ಎಲ್ಲಾ ಸಂಸದರು ಶಿಷ್ಟಾಚಾರ ಪಾಲನೆ ಮಾಡಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ. 
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪಟ್ಟು ಹಿಡಿದಿದ್ದಾರೆ. ತಮ್ಮ ಬೇಡಿಕೆಯನ್ನು ಈಡೇರಿಸದ ಕಾರಣ ಮೋದಿ ವಿರುದ್ಧ ತಿರುಗಿ ಬಿದ್ದ ನಾಯ್ಡು ಅವರು ಎನ್ ಡಿಎ ಮೈತ್ರಿಯಿಂದ ಹೊರ ಬಂದಿದ್ದರು. ಇದರ ಬೆನ್ನಲ್ಲೇ ವೈಎಸ್ಆರ್ ಕಾಂಗ್ರೆಸ್ ಪಕ್ಷ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com