ರಾಹುಲ್ ಕರೆಗೆ ಓಗೊಟ್ಟು ಗೋವಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಶಾಂತಾರಾಮ್ ನಾಯ್ಕ್!

ಯುವಕರಿಗೆ ರಾಜಕಾರಣದಲ್ಲಿ ಹೆಚ್ಚು ಅವಕಾಶ ನೀಡಬೇಕೆಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕರೆಗೆ ಓಗೊಟ್ಟು ಗೋವಾ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಶಾಂತಾರಾಮ್ ನಾಯ್ಕ್(71) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಶಾಂತಾರಾಮ್ ನಾಯ್ಕ್
ಶಾಂತಾರಾಮ್ ನಾಯ್ಕ್
Updated on
ಗೋವಾ: ಯುವಕರಿಗೆ ರಾಜಕಾರಣದಲ್ಲಿ ಹೆಚ್ಚು ಅವಕಾಶ ನೀಡಬೇಕೆಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕರೆಗೆ ಓಗೊಟ್ಟು ಗೋವಾ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಶಾಂತಾರಾಮ್ ನಾಯ್ಕ್(71) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಹುಲ್ ಗಾಂಧಿ ಹೇಳಿಕೆ ಬೆನ್ನಲ್ಲೇ ರಾಜೀನಾಮೆ ನೀಡಿರುವ ಮೊದಲ ಕಾಂಗ್ರೆಸ್ ಅಧ್ಯಕ್ಷ ಶಾಂತಾರಾಮ್ ನಾಯ್ಕ್ ಆಗಿದ್ದು ರಾಜೀನಾಮೆ ಪತ್ರವನ್ನುಎಐಸಿಸಿಗೆ ಕಳಿಸಿದ್ದಾರೆ. ರಾಜೀನಾಮೆ ಬಳಿಕ ಪ್ರತಿಕ್ರಿಯೆ ನೀಡಿರುವ ಶಾಂತಾರಾಮ್ ನಾಯ್ಕ್(71) ನಾನು ಯುವಕರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. 
ರಾಹುಲ್ ಗಾಂಧಿ ಅವರ ಭಾಷಣದಿಂದ ಪ್ರೇರಣೆ ಪಡೆದಿದ್ದೇನೆ, ಯುವಕರ ರಾಜಕಾರಣ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕೆಂಬ ಉದ್ದೇಶದಿಂದ ರಾಜೀನಾಮೆ ನೀಡಿದ್ದೇನೆ ಎಂದು ಶಾಂತಾರಾಮ್ ನಾಯ್ಕ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com