ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಯೋಧನೊಬ್ಬ ಮಂಗಳವಾರ ತನ್ನ ಸರ್ವಿಸ್ ರೈಫಲ್ ನಿಂದ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪೊಲೀಸರು ತಿಳಿಸಿದ್ದಾರೆ.
10ನೇ ಸಿಖ್ ರೆಜಿಮೆಂಟ್ ನ ಸೆಪೊಯ್ ಕುಲ್ವಿಂದರ್ ಸಿಂಗ್ ಇಂದು ಮುಘಲ್ ಗುಂಡ್ ಸೇನಾ ಕ್ಯಾಂಪ್ ನಲ್ಲಿ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಗುಂಡು ಹಾರಿಸಿಕೊಂಡ ಯೋಧನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.