ಸಂಸತ್ತಿನಲ್ಲಿ ಮುಂದುವರೆದ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ

ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಹಾಗೂ ಇರಾಕ್ ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯ ಸಾವು ವಿಚಾರಗಳ ಕುರಿತಂತೆ ಸಂಸತ್ತು ಕಲಾಪದಲ್ಲಿ ವಿರೋಧ ಪಕ್ಷಗಳ ನಾಯಕರು ತೀವ್ರ ಗದ್ದಲವುಂಟು ಮಾಡಿದ ಹಿನ್ನಲೆಯಲ್ಲಿ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಗಿದೆ...
ಸ್ಪೀಕರ್ ಸುಮಿತ್ರ ಮಹಾಜನ್
ಸ್ಪೀಕರ್ ಸುಮಿತ್ರ ಮಹಾಜನ್
Updated on
ನವದೆಹಲಿ; ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಹಾಗೂ ಇರಾಕ್ ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯ ಸಾವು ವಿಚಾರಗಳ ಕುರಿತಂತೆ ಸಂಸತ್ತು ಕಲಾಪದಲ್ಲಿ ವಿರೋಧ ಪಕ್ಷಗಳ ನಾಯಕರು ತೀವ್ರ ಗದ್ದಲವುಂಟು ಮಾಡಿದ ಹಿನ್ನಲೆಯಲ್ಲಿ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಗಿದೆ.
ಅವಿಶ್ವಾಸ ನಿರ್ಣಯ ಮಂಡನೆ ಹಾಗೂ ಭಾರತೀಯ ಸಾವು ಪ್ರಕರಣಗಳ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾಡಿದ ವಿರೋಧ ಪಕ್ಷಗಳು ಸದನದ ಬಾವಿಗಿಳಿದು ಪ್ರತಿಭಟಿಸಲು ಆರಂಭಿಸಿದವು. ಅಲ್ಲದೆ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಘೋಷಣಾ ವಾಕ್ಯಗಳನ್ನು ಪ್ರದರ್ಶಿಸಿಲು ಆರಂಭಿಸಿದ್ದರು. 
ಈ ನಡುವೆ ಪ್ರಶ್ನಾವಳಿ ಅವಧಿಯನ್ನು ಮುಂದುವರೆಸಲು ಮುಂದಾದ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ, ತೀವ್ರ ಗದ್ದಲವಿದ್ದ ಕಾರಣ ಪ್ರಶ್ನಾವಳಿ ಅವಧಿಯನ್ನು ನಡೆಸಲು ಸಾಧ್ಯವಾಗಲಿಲ್ಲ. ಹಲವು ಬಾರಿ ಮನವಿ ಮಾಡಿಕೊಂಡು ವಿಪಕ್ಷಗಳು ಕೇಳದ ಕಾರಣ ಕಲಾಪವನ್ನು ನಾಳೆಗೆ ಮುಂದೂಡಿದರು. 
ಕಲಾಪದ ವೇಳೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇರಾಕ್ ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯರನ್ನು ಇಸಿಸ್ ಉಗ್ರರು ಹತ್ಯೆ ಮಾಡಿದ ಕುರಿತಂತೆ ವಿವರಣಾತ್ಮಕವಾಗಿ ಹೇಳಿಕೆ ನೀಡಲು ಆರಂಭಿಸಿದ್ದರು. ಆದರೆ, ಇದಕ್ಕೆ ವಿರೋಧ ಪಕ್ಷಗಳು ಅವಕಾಶ ನೀಡದೆಯೇ ಸರ್ಕಾರದ ವಿರುದ್ಧ ಘೋಷಣೆ ಕೂಗಲು ಆರಂಭಿಸಿದ್ದರು. 
ಈ ವೇಳೆ ತೀವ್ರವಾಗಿ ಕೆಂಡಾಮಂಡಲ ಕೊಂಡ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಇದು ಸರಿಯಲ್ಲ. ಸೂಕ್ಷ್ಮತೆಯಿಲ್ಲದಂತೆ ವರ್ತಿಸದಿರಿ. ದಯವಿಟ್ಟು ಈ ರೀತಿ ರಾಜಕೀಯ ಮಾಡಬೇಡಿ ಎಂದು ಹೇಳಿದರು. 
ಇದೇ ವೇಳೆ ಟಿಡಿಪಿ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದರ ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ಮಾತನಾಡಿರುವ ಅವರು, ದೇಶವು ಇಂತಹ ವಿಷಾದ ಸ್ಥಿತಿಯ ರಾಜ್ಯವನ್ನು ಎಂದಿಗೂ ನೋಡಿಲ್ಲ. ಈ ರೀತಿಯ ವರ್ತನೆ ಸರಿಯಲ್ಲ. ನಿಮ್ಮ ಜನತೆಯ ಬಗ್ಗೆ ನೀವು ಸೂಕ್ಷ್ಮತೆ ಇಲ್ಲದಂತೆ ವರ್ತಿಸುತ್ತಿದ್ದೀರಿ. ಸಂಸತ್ತು ಕಲಾಪವನ್ನು ನಡೆಸುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯ ಮಂಡನೆ ಮಂಡಿಸಲು ಅವಕಾಶವಿಲ್ಲ ಎಂದು ಹೇಳಿ ಕಲಾಪವನ್ನು ನಾಳೆಗೆ ಮುಂದೂಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com