ಗುಜರಾತ್ ಬಳಿಕ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜಿನಾಮೆ?

ಯುವಕರಿಗೆ ರಾಜಕಾರಣದಲ್ಲಿ ಹೆಚ್ಚು ಅವಕಾಶ ನೀಡಬೇಕೆಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕರೆಗೆ ಓಗೊಟ್ಟು ಗೋವಾ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಶಾಂತಾರಾಮ್ ನಾಯ್ಕ್...
ರಾಜ್ ಬಬ್ಬರ್
ರಾಜ್ ಬಬ್ಬರ್
Updated on
ಲಖನೌ: ಯುವಕರಿಗೆ ರಾಜಕಾರಣದಲ್ಲಿ ಹೆಚ್ಚು ಅವಕಾಶ ನೀಡಬೇಕೆಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕರೆಗೆ ಓಗೊಟ್ಟು ಗೋವಾ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಶಾಂತಾರಾಮ್ ನಾಯ್ಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇದರ ಬೆನ್ನಲ್ಲೇ ಉತ್ತರಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 
ಉತ್ತರಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಅವರು ಮಂಗಳವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಅವರ ರಾಜಿನಾಮೆಯನ್ನು ಪಕ್ಷ ಪರಿಗಣಿಸಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. 
ಇತ್ತೀಚೆಗೆ ಉತ್ತರಪ್ರದೇಶದ ಗೋರಖ್ ಪುರ ಮತ್ತು ಫುಲ್ಪರ್ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನೀಡಿದ ಕಳಪೆ ಪ್ರದರ್ಶನದ ನಂತರ ಈ ಬೆಳವಣಿಗೆ ಸಂಭವಿಸಿದೆ. ರಾಜ್ ಬಬ್ಬರ್ ರಾಜಿನಾಮೆ ಕರಿತು ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ. 
ರಾಜ್ ಬಬ್ಬರ್ ಸ್ಥಾನಕ್ಕೆ ಬ್ರಾಹ್ಮಣ ಸಮುದಾಯದ ನಾಯಕರಾದ ಜಿತಿನ್ ಪ್ರಸಾದ್, ರಾಜೇಶ್ ಮಿಶ್ರಾ ಮತ್ತು ಲಲಿತೇಶ್ಪತಿ ತ್ರಿಪಾಠಿ ಅವರನ್ನು ನೇಮಿಸುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com