ಛತ್ತರ್ಪುರ್: ವಿವಾದಿತ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ನಮ್ಮ ನಿಮ್ಮೆಲ್ಲರ ಸಂಕಲ್ಪವಾಗಿದ್ದು ಇದನ್ನು ನಾವು ಪೂರ್ಣಗೊಳಿಸುತ್ತೇವೆ ಎಂದು ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯಲ್ಲಿ 52 ಅಡಿ ಎತ್ತರದ ಮಹಾರಾಜ್ ಛತ್ರಾಸಲ್ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕೇವಲ ನಮ್ಮ ನಿಮ್ಮ ಇಚ್ಛೆ ಅಲ್ಲ. ಬದಲಿಗೆ ನಮ್ಮ ನಿಮ್ಮ ಸಂಕಲ್ಪವಾಗಿದೆ ಎಂದರು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಮೂಲಕ ಈ ಸಂಕಲ್ಪವನ್ನು ನಾವು ಪೂರ್ಣಗೊಳಿಸುತ್ತೇವೆ ಎಂದು ಮೋಹನ್ ಭಾಗವತ್ ತಿಳಿಸಿದ್ದಾರೆ.