ರೈತರು ಸರ್ಕಾರಕ್ಕೆ 17 ಸಾವಿರ ಕೋಟಿ ರು. ವಿದ್ಯುತ್ ಬಿಲ್ ಪಾವತಿಸಬೇಕು: ಮಹಾ ಸಿಎಂ

ರೈತರ ಕೃಷಿ ಪಂಪ್ ಸೆಟ್ ಗಳ 17 ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ ಇದ್ದು, ಅದನ್ನು ವಸೂಲಿ ಮಾಡಲು....
ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್
ಮುಂಬೈ: ರೈತರ ಕೃಷಿ ಪಂಪ್ ಸೆಟ್ ಗಳ 17 ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ ಇದ್ದು, ಅದನ್ನು ವಸೂಲಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ.
ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಪರಿಗಣಿಸಿ ಸರ್ಕಾರ ತಾತ್ಕಾಲಿಕವಾಗಿ ವಿದ್ಯುತ್ ಬಿಲ್ ವಸೂಲಿ ಪ್ರಕ್ರಿಯೆ ಸ್ಥಗಿತಗೊಂಡಿಳಿಸಿತ್ತು. ಈಗ ಮತ್ತೆ ಆ ಪ್ರಕ್ರಿಯೆ ಆರಂಭವಾಗಿದೆ ಎಂದು ಫಡ್ನವಿಸ್ ಹೇಳಿದ್ದಾರೆ.
ರೈತರಿಂದ ಬಾಕಿ ವಿದ್ಯುತ್ ಬಿಲ್ ಪಡೆಯುವಂತೆ ರಾಜ್ಯ ಸರ್ಕಾರ ಮಹಾರಾಷ್ಟ್ರ ವಿದ್ಯುತ್ ನಿಯಂತ್ರಣ ಆಯೋಗ(ಎಂಇಆರ್ ಸಿ)ಕ್ಕೆ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗದ ರೈತರ ಪಂಪ್ ಸೆಟ್ ಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಕುರಿತು ಎನ್ ಸಿಪಿ ನಾಯಕ ಅಜಿತ್ ಪವಾರ್ ಅವರ ಪ್ರಶ್ನೆಗೆ ಮಹಾ ಸಿಎಂ ರೀತಿ ಉತ್ತರ ನೀಡಿದ್ದಾರೆ.
ರಾಜ್ಯ ಸರ್ಕಾರ ಈ ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದನ್ನು ನಿಲ್ಲಿಸಬೇಕು ಎಂದು ಅಜಿತ್ ಪವಾರ್ ಅವರು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com