ಬಿಹಾರ; ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಜನರ ದುರ್ಮರಣ, 25 ಗಾಯ

ಬಿಹಾರ ರಾಜ್ಯದ ನಳಂದಾ ಜಿಲ್ಲೆಯಲ್ಲಿನ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಐವರು ದುರ್ಮರಣವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ...
ಬಿಹಾರ; ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಜನರ ದುರ್ಮರಣ, 25 ಗಾಯ
ಬಿಹಾರ; ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಜನರ ದುರ್ಮರಣ, 25 ಗಾಯ
ಬಿಹಾರ: ಬಿಹಾರ ರಾಜ್ಯದ ನಳಂದಾ ಜಿಲ್ಲೆಯಲ್ಲಿನ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಐವರು ದುರ್ಮರಣವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. 
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, 25 ಮಂದಿಯ ಪೈಕಿ 17 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಹಾಗೂ ಅಗ್ನಿ ಶಾಮಕದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 
ನಳಂದಾ ಜಿಲ್ಲೆಯ ಜಲಾಲ್ಪುರ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಿದ್ದು, ಸ್ಫೋಟಕ್ಕೆ ಈ ವರೆಗೂ ಕಾರಣಗಳು ತಿಳಿದುಬಂದಿಲ್ಲ. 
ನಳಂದಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಎಸ್'ಪಿ ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದು, ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ಪೊಲೀಸ್ ಠಾಣೆಯ ಉಸ್ತುವಾರಿಯನ್ನು ಅಮಾನತು ಮಾಡಿದ್ದಾರೆ. 
ಪ್ರಕರಣ ಸಂಬಂಧ ಹೆಚ್ಚಿನ ತನಿಖೆಗಾಗಿ ಉಗ್ರ ನಿಗ್ರಹ ದಳದ ಅಧಿಕಾರಿಗಳೂ ಸಹ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com