2011ರಲ್ಲಿ ಲೋಕಪಾಲ ಮಸೂದೆಗೆ ಒಪ್ಪಿಗೆನ ನೀಡುವಂತೆ ಅಣ್ಣಾ ಹಜಾರೆಯವರು ಆರಂಭಿಸಿದ್ದ ಆಂದೋಲನ ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಭ್ರಷ್ಟಾಚಾರದ ವಿರುದ್ಧದ ಕೂಗು ಜೋರಾಗಿತ್ತು. ಇದೀಗ ಮತ್ತೆ ಅಣ್ಣಾ ಹಜಾರೆಯವರು ಸತ್ಯಾಗ್ರಹವನ್ನು ಆರಂಭಿಸಿದ್ದು, ಹೋರಾಟದಲ್ಲಿ ಸಾವಿರಾರು ಜನರು ಭಾಗಿಯಾಗುವ ಸಾಧ್ಯತೆಗಳಿವೆ.