ಅಯೋಧ್ಯೆ ವಿವಾದ: ಏಪ್ರಿಲ್ 6ಕ್ಕೆ ವಿಚಾರಣೆ ಮುಂದೂಡಿದ 'ಸುಪ್ರೀಂ'

ವಿವಾದಿತ ರಾಮ ಜನ್ಮಭೂಮಿ ಮತ್ತು ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 6ಕ್ಕೆ ಮುಂದೂಡಿದೆ...
ಬಾಬ್ರಿ ಮಸೀದಿ
ಬಾಬ್ರಿ ಮಸೀದಿ
ನವದೆಹಲಿ: ವಿವಾದಿತ ರಾಮ ಜನ್ಮಭೂಮಿ ಮತ್ತು ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 6ಕ್ಕೆ ಮುಂದೂಡಿದೆ. 
ಪ್ರಕರಣ ಸಂಬಂಧ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ  13 ಮೇಲ್ಮನವಿ ಅರ್ಜಿಗಳು ಸಲ್ಲಿಕೆಯಾಗಿದ್ದು ಇದರ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಒಳಪಡಿಸಲಿದೆ. 
ವಿವಾದ ಸಂಬಂಧ ಈ ಹಿಂದೆ ಸಲ್ಲಿಕೆಯಾಗಿದ್ದ 32 ಮಧ್ಯಂತರ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ, ಶ್ಯಾಮ್ ಬೆನೆಗಲ್, ಅಪರ್ಣಾ ಸೇನ್ ಮತ್ತು ಟೀಸ್ತಾ ಸೆಟಲ್ವಾಡ್ ಸೇರಿದಂತೆ ಹಲವರು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿದ್ದರು. 
ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಅಶೋಕ್ ಭೂಷಣ್ ಹಾಗೂ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠ ಎಲ್ಲಾ 32 ಮಧ್ಯಂತರ ಅರ್ಜಿ ವಜಾಗೊಳಿಸಿದ್ದು ಇದೇ ವೇಲೆ ಈ ಪ್ರಕರಣದಲ್ಲಿ ಯಾವುದೇ ಮಧ್ಯಂತರ ಅರ್ಜಿಗಳನ್ನು ಸಲ್ಲಿಸಬಾರದು ಎಂದು ನ್ಯಾಯಮೂರ್ತಿಗಳು ನಿರ್ದೇಶನ ನೀಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com