ಅನಂತ್ ನಾಗ್ ಜಿಲ್ಲೆಯ ಶಿಸ್ತಾರ್ಗಾಮ್ ನ ದೂರು ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆಯಿಂದಲೇ ಭಾರತೀಯ ಸೇನಾಪಡೆ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡಿದಿದೆ.