ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ಶನಿವಾರ ತಿಳಿದುಬಂದಿದೆ.
ಅನಂತ್ ನಾಗ್ ಜಿಲ್ಲೆಯ ಶಿಸ್ತಾರ್ಗಾಮ್ ಗ್ರಾಮದ ದೂರು ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನಲೆಯಲ್ಲಿ ಭಾರತೀಯ ಸೇನಾಪಡೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸಿಆರ್'ಪಿಎಫ್ ಯೋಧರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.
ಉಗ್ರರು ಅಡಗಿ ಕುಳಿತಿರುವ ಪ್ರದೇಶವನ್ನು ಸೇನೆ ಸುತ್ತುವರೆಯುತ್ತಿದ್ದಂತೆಯೇ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪ್ರಸ್ತುತ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರಿ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.