ರಾಜ್ಯಸಭೆ ಸೋಲಿನಿಂದ ಮಾಯಾವತಿ ನಿರಾಶೆಗೊಂಡಿದ್ದಾರೆ: ಬಿಜೆಪಿ

ಉತ್ತರಪ್ರದೇಶ ರಾಜ್ಯಸಭೆ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ನಿರಾಶೆಗೊಂಡಿದ್ದಾರೆ ಎಂದು ಬಿಜೆಪಿ ಹೇಳಿದೆ....
ಬಿಜೆಪಿ
ಬಿಜೆಪಿ
Updated on: 
ಲಖನೌ: ಉತ್ತರಪ್ರದೇಶ ರಾಜ್ಯಸಭೆ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ನಿರಾಶೆಗೊಂಡಿದ್ದಾರೆ ಎಂದು ಬಿಜೆಪಿ ಹೇಳಿದೆ. 
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಭಾವವನ್ನು ಬಳಸಿ ಬಿಎಸ್ಪಿ ಪಕ್ಷದ ಅಭ್ಯರ್ಥಿ ಸೋಲಿಗೆ ಕಾರಣವಾಗಿದೆ. ಇದರ ಜತೆಗೆ ಬಿಎಸ್ಪಿ ಹಾಗೂ ಎಸ್ಪಿ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದರು. 
ಇದಕ್ಕೆ ತಿರುಗೇಟು ನೀಡಿರುವ ಉತ್ತರ ಪ್ರದೇಶ ಆರೋಗ್ಯ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಅವರು ರಾಜ್ಯಸಭೆ ಸೋಲಿನಿಂದಾಗಿ ಮಾಯಾವತಿ ನಿರಾಶೆಗೊಂಡಿದ್ದು ಬಿಜೆಪಿ ವಿರುದ್ಧ ಆರೋಪ ಮಾಡಿದ್ದಾರೆ ಎಂದು ಹೇಳಿದರು. 
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿದ ರಿಟರ್ನ್ ಗಿಫ್ಟ್ ಸಿಕ್ಕಿಲ್ಲದ ಕಾರಣ ಮಾಯಾವತಿ ಅವರು ನಿರಾಶೆಗೊಂಡಿದ್ದಾರೆ. ಇದರಿಂದಾಗಿ ಬಿಜೆಪಿ ವಿರುದ್ಧ ವಿನಃ ಆರೋಪ ಮಾಡುತ್ತಿದ್ದಾರೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com