ಪರಿಕ್ಕರ್ ಶೀಘ್ರವೇ ಮರಳುತ್ತಾರೆ, ನಾಯಕತ್ವ ಬದಲಾವಣೆಯ ಪ್ರಶ್ನೆಯಿಲ್ಲ: ಬಿಜೆಪಿ

ಅನಾರೋಗ್ಯದ ಕಾರಣದಿಂದಾಗಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಶೀಘ್ರವಾ ರಾಜ್ಯಕ್ಕೆ ಮರಳಲಿದ್ದಾರೆ,...
ಮನೋಹರ್ ಪರಿಕ್ಕರ್
ಮನೋಹರ್ ಪರಿಕ್ಕರ್
Updated on: 
ಪಣಜಿ: ಅನಾರೋಗ್ಯದ ಕಾರಣದಿಂದಾಗಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಶೀಘ್ರವಾ ರಾಜ್ಯಕ್ಕೆ ಮರಳಲಿದ್ದಾರೆ, ಹೀಗಿರುವಾಗ ನಾಯಕತ್ವ ಬದಲಾವಣೆಯ ಅಗತ್ಯವಿಲ್ಲ ಎಂದು ಹಿರಿಯ ಬಿಜೆಪಿ ನಾಯಕರು ತಿಳಿಸಿದ್ದಾರೆ.
ತಮ್ಮ ತವರು ರಾಜ್ಯದಿಂದು ದೂರವಿರುವ ಪರಿಕ್ಕರ್ ಆರು ವಾರಗಳಲ್ಲಿ ವಾಪಾಸಾಗಲಿದ್ದಾರೆ, ಅವರು ತಮ್ಮ ಅಧಿಕಾರವನ್ನು ಯಾರಿಗೂ ಬಿಟ್ಟುಕೊಡುವುದಿಲ್ಲ ಎಂದು ಗೋವಾ ನಗರಾಭಿವೃದ್ಧಿ ಸಚಿವ ಫ್ರಾನ್ಸಿಸ್ ಡಿ.ಸೋಜಾ ಹೇಳಿದ್ದಾರೆ, 
ಸರ್ಕಾರದ ಹಲವು ಯೋಜನೆಗಳ ಬಗ್ಗೆ ಸಚಿವರು ಹಾಗೂ ಕಾರ್ಯದರ್ಶಿಗಳ ಜೊತೆ ನಿರಂತರ ಸಂಪರ್ಕ ಹೊಂದಿದ್ದಾರೆ, ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಅವರ ಮಾರ್ಗದರ್ಶನದಲ್ಲಿ ಸರ್ಕಾರದ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
ಮನೋಹರ್ ಪರಿಕ್ಕರ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಅವರ ಬದಲಿಗೆ ಮತ್ತೊಬ್ಬ ನಾಯಕನಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಕೆಲ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿರುವ ಮನೋಹರ್ ಪರಿಕ್ಕರ್, ಅಮೆರಿಕಾದಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com