ಕಾಶ್ಮೀರ ಪ್ರತ್ಯೇಕತಾವಾದಿಯ ಮಗ ಹಿಜ್ಬುಲ್ ಉಗ್ರ ಸಂಘಟನೆಗೆ ಸೇರ್ಪಡೆ

ಪ್ರತ್ಯೇಕತಾವಾದಿ ನಾಯಕ ಗಿಲಾನಿ ನಂತರ ಹುರಿಯತ್ ಕಾನ್ಫರೆನ್ಸ್ ನ ನಾಯಕತ್ವ ವಹಿಸಿಕೊಂಡಿದ್ದ ಮೊಹಮ್ಮದ್ ಅಶ್ರಫ್ ಸೆಹ್ರಾಯಿ ನ ಪುತ್ರ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸೇರ್ಪಡೆಯಾಗಿದ್ದು....
ಹಿಜ್ಬುಲ್ ಮುಜಾಹಿದ್ದೀನ್
ಹಿಜ್ಬುಲ್ ಮುಜಾಹಿದ್ದೀನ್
ಶ್ರೀನಗರ: ಪ್ರತ್ಯೇಕತಾವಾದಿ ನಾಯಕ ಗಿಲಾನಿ ನಂತರ ಹುರಿಯತ್ ಕಾನ್ಫರೆನ್ಸ್ ನ ನಾಯಕತ್ವ ವಹಿಸಿಕೊಂಡಿದ್ದ ಮೊಹಮ್ಮದ್ ಅಶ್ರಫ್ ಸೆಹ್ರಾಯಿ ನ ಪುತ್ರ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸೇರ್ಪಡೆಯಾಗಿದ್ದು, ಈ ವ್ಯಕ್ತಿಯ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 
ಜುನೈದ್ ನಾಪತ್ತೆಯಾಗಿರುವುದರ ಬಗ್ಗೆ ಆತನ ಸಹೋದರ ಜುನೈದ್ ಅಶ್ರಫ್ ವನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಇದಾದ ಬಳಿಕ ಜುನೈದ್ ಎಕೆ-47 ರೈಫಲ್ ನೊಂದಿಗಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆತ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸೇರಿದ್ದಾನೆಂದು ತಿಳಿದುಬಂದಿದೆ. 
ಗಿಲಾನಿ ನೇತೃತ್ವ ವಹಿಸಿದ್ದ ಪಕ್ಷಕ್ಕೆ ಇತ್ತೀಚೆಗಷ್ಟೇ ಮೊಹಮ್ಮದ್ ಅಶ್ರಫ್ ಸೆಹ್ರಾಯಿ ಅಧ್ಯಕ್ಷನಾಗಿ ನೇಮಕಗೊಂಡಿದ್ದ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com