ಮುಂಬೈ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ)ಯ 2001 ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಮಹಾರಾಷ್ಟ್ರ ಸರ್ಕಾರ ಬಿಎಂಸಿಗೆ ಆದೇಶಿಸಿದೆ.
261 ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 2001 ನೌಕರರ ವಿರುದ್ಧ ಬಾಕಿ ಇರುವ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುವಂತೆ ಬಿಎಂಸಿಗೆ ಸೂಚಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಎಂಸಿ ಸುಮಾರು 1 ಸಾವಿರ ನೌಕರರು ಲಂಚಕ್ಕಾಗಿ ಉದ್ದೇಶ ಪೂರ್ವಕವಾಗಿಯೇ ಕಡತಗಳನ್ನು ಪಾಸ್ ಮಾಡುತ್ತಿಲ್ಲ. ಆದ್ದರಿಂದ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಕಾರ್ಪೋರೇಟರ್ ಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.
ಕಾರ್ಪೋರೇಟ್ ಗಳ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಮಾರ್ಚ್ 8ರಂದು ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಬಾಕಿ ಇರುವ ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸುವಂತೆ ಆದೇಶಿಸಿದೆ.