ನಮೋ ಆ್ಯಪ್ ವಿವಾದ ಬೆನ್ನಲ್ಲೇ ಪ್ಲೇಸ್ಟೋರ್ ನಿಂದ ಕಾಂಗ್ರೆಸ್ ಪಕ್ಷದ ಆ್ಯಪ್ ನಾಪತ್ತೆ?

ಪ್ರಧಾನಿ ನರೇಂದ್ರ ಮೋದಿ ಅವರ ನಮೋ ಆ್ಯಪ್ ಬಗ್ಗೆ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಪ್ಲೇ ಸ್ಟೋರ್ ನಿಂದ ತನ್ನದೇ ಆ್ಯಪ್ ಅನ್ನು ಡಿಲೀಟ್ ಮಾಡಿರುವುದೇಕೆ. ಕಾಂಗ್ರೆಸ್ ಪಕ್ಷ ಏನನ್ನು ಮರೆಮಾಚಲು ಯತ್ನಿಸುತ್ತಿದೆ ..
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಮೋ ಆ್ಯಪ್ ಬಗ್ಗೆ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಪ್ಲೇ ಸ್ಟೋರ್ ನಿಂದ ತನ್ನದೇ ಆ್ಯಪ್ ಅನ್ನು ಡಿಲೀಟ್ ಮಾಡಿರುವುದೇಕೆ. ಕಾಂಗ್ರೆಸ್ ಪಕ್ಷ ಏನನ್ನು ಮರೆಮಾಚಲು  ಯತ್ನಿಸುತ್ತಿದೆ ಎಂದು ಬಿಜೆಪಿ ಮುಖಂಡ ಹಾಗೂ ಪಕ್ಷದ ರಾಷ್ಟ್ರೀಯ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅಮಿತ್ ಮಾಳವೀಯ, ನಮೋ ಆ್ಯಪ್ ಡಿಲೀಟ್ ಮಾಡಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿದ್ದರು. ಅಲ್ಲದೆ ಡಿಲೀಟ್ ನಮೋ ಆ್ಯಪ್ ಎಂಬ ಅಭಿಯಾನ ಕೂಡ ಆರಂಭಿಸಿದ್ದರು. ಆದರೆ ಗೂಗಲ್ ಪ್ಲೇ ಸ್ಟೋರ್ ನಿಂದ ಕಾಂಗ್ರೆಸ್ ಪಕ್ಷದ ಅಧಿಕೃತ್ಯ ಆ್ಯಪ್ ನಾಪತ್ತೆಯಾಗಿದೆ. ಇಷ್ಟಕ್ಕೂ ಆ್ಯಪ್ ಡಿಲೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಏನನ್ನು ಮರೆ ಮಾಚಲು ಪ್ರಯತ್ನಿಸುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ, ಕಾಂಗ್ರೆಸ್ ಪಕ್ಷದ ಆ್ಯಪ್ ಬಗ್ಗೆ ಕಾಂಗ್ರೆಸ್ ಪಕ್ಷದ ಅಧಿಕೃತ ವೆಬ್ ಸೈಟ್ ನಲ್ಲೂ ಮಾಹಿತಿ ಇಲ್ಲ. ಆ್ಯಪ್ ನಲ್ಲಿ ಬದಲಾವಣೆ ಮಾಡಲಾಗುತ್ತಿದ್ದು. ಮತ್ತೊಮ್ಮೆ ಪ್ರಯತ್ನಿಸಿ ಎಂದು ಸಂದೇಶ ಬರುತ್ತಿದೆ. ಆ್ಯಪ್ ನಲ್ಲಿ ಕಾಂಗ್ರೆಸ್ ಪಕ್ಷ ಏನನ್ನು ಬದಲಾವಣೆ ಮಾಡುತ್ತಿದೆ. ಬದಲಾವಣೆ ಮೂಲಕ ಮತ್ಯಾವ ಅಂಶವನ್ನು ಮರೆ ಮಾಚಲು ಪ್ರಯತ್ನಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಮತ್ತು ಸರ್ಕಾರದ ವಿರುದ್ಧ ಅಭಿಯಾನಗಳನ್ನು ನಡೆಸಲಾಗುತ್ತಿತ್ತು. ಕೇಂಬ್ರಿಡ್ಜ್ ಅನಲಿಟಿಕಾದೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸಂಬಂಧವಿದೆ ಎಂದು ನಾವು ಆರೋಪಿಸಿದ್ದೆವು. ಇದೀಗ ಈ ಆರೋಪಕ್ಕೆ ಸಾಕ್ಷ್ಯ ದೊರೆತಿದ್ದು, ಕೇಂಬ್ರಿಡ್ಜ್ ಅನಲಿಟಿಕಾ ದತ್ತಾಂಶ ಸೋರಿಕೆಯ ಹಿಂದೆ ಯಾರ 'ಕೈ'ವಾಡವಿದೆ ಎಂಬುದು ಸಾಬೀತಾಗಿದೆ ಎಂದು ಮಾಳವಿಯ ಟ್ವೀಟ್ ಮಾಡಿದ್ದಾರೆ.
ತಾಂತ್ರಿಕ ದೋಷದಿಂದ ಆ್ಯಪ್ ನಾಪತ್ತೆ
ಇನ್ನು ಕಾಂಗ್ರೆಸ್ ಮೂಲಗಳ ಪ್ರಕಾರ ಆ್ಯಪ್ ನಿರ್ವಹಣೆ ಮಾಡುತ್ತಿರುವ ಸಿಂಗಾಪುರ ಮೂಲದ ಸಂಸ್ಥೆಯ ಸರ್ವರ್ ನಲ್ಲಿ ತಾಂತ್ರಿಕ ದೋಷ ತಲೆದೋರಿದ್ದು, ಇದೇ ಕಾರಣಕ್ಕೆ ಆ್ಯಪ್ ಪ್ಲೇ ಸ್ಟೋರ್ ನಲ್ಲಿ ದೊರೆಯುತ್ತಿಲ್ಲ ಎನ್ನಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com