ಸಂಯುಕ್ತ ರಂಗ ರಚನೆಗಾಗಿ ದೆಹಲಿಯಲ್ಲಿ ಮಮತಾ, ವಿಜಯವಾಡದಲ್ಲಿ ನಾಯ್ಡು ಕಸರತ್ತು

ತೃಣಮೂಲ ನಾಯಕಿ ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದಿನಿಂದ ನಾಲ್ಕು ದಿನ ದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದು, 18 ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ನವದೆಹಲಿ : ತೃಣಮೂಲ ನಾಯಕಿ ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದಿನಿಂದ ನಾಲ್ಕು ದಿನ ದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದು, 18 ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಆರ್ ಜೆಡಿ, ಟಿಪಿಡಿ, ಟಿಆರ್ ಎಸ್ ಅಲ್ಲದೇ,  ಎನ್ ಸಿಪಿ ಮುಖ್ಯಸ್ಥ ಶರದ್ ಪವರ್, ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್,  ಜೆಡಿಎಸ್ ನ ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಈ ಪ್ರವಾಸದ ವೇಳೆ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸದಿರಲು ನಿರ್ಧರಿಸಿದ್ದಾರೆ. ರಾಹುಲ್ ಗಾಂಧಿಗೆ ಎಡಪಕ್ಷದ ಒಲವು ಹೆಚ್ಚಿದ್ದು, ಸೀತಾರಾಮ್ ಯೆಚೂರಿ ಚಿಂತನೆಯ ಶಾಲೆಯಲ್ಲಿದ್ದಾರೆ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಅವರೊಂದಿಗೆ ಎಲ್ಲಾ 35 ತೃಣಮೂಲಕ ಕಾಂಗ್ರೆಸ್ ಸಂಸದರು ನವದೆಹಲಿಯ ಬ್ಯಾಂಗೊ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆಯ ಈ ಮಧ್ಯೆ ಅರವಿಂದ್ ಕೇಜ್ರಿವಾಲ್  ಕಮಲ್ ಹಾಸನ್ ಅವರ ಮಕ್ಕಳ್ ನಿಧಿ ಮೈಮ್ ಪಕ್ಷದ ಪರ ಬ್ಯಾಟಿಂಗ್ ಮಾಡಿದ್ದಾರೆಯ ಕಾಂಗ್ರೆಸ್ , ಬಿಜೆಪಿಯೇತರ ತೃತೀಯ ರಂಗ ರಚನೆಯ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಮುಂದಾಗಿದ್ದಾರೆ.

 ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್  ಹಾಗೂ ಅವರ ಪುತ್ರಿ ಸುಪ್ರೀಯಾ ಸುಳೆ ಇಂದು ರಾತ್ರಿ ಮಮತಾ ಬ್ಯಾನರ್ಜಿಗೆ ಔತಣಕೂಟ ಆಯೋಜಿಸಿದ್ದಾರೆ.

ಇತ್ತ ವಿಜಯವಾಡದಲ್ಲಿ ಟಿಡಿಪಿ ಮುಖ್ಯಸ್ಥ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೂಡಾ ಸಂಯುಕ್ತ ರಂಗ ರಚನೆ ನಿಟ್ಟಿನಲ್ಲಿ ವಿವಿಧ ಪಕ್ಷಗಳ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ಬೆಳವಣಿಗೆಗಳು ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com