
ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವಿಯಾ ಮಾಡಿದ್ದ ಟ್ವಿಟ್ ಕುರಿತಂತೆ ಪ್ರತಿಕ್ರಿಯಿಸಿರುವ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ನಿರ್ದೇಶನ ನೀಡಿದೆ ಎಂದು ಆರೋಪಿಸಿದ್ದಾರೆ.
ಚುನಾವಣೆಗೆ ಸಂಬಂಧಿಸಿದ ಯಾವುದೇ ಮಾಹಿತಿಗಳನ್ನು ಸೋರಿಕೆ ಮಾಡದಂತೆ ಚುನಾವಣಾ ಆಯೋಗವನ್ನು ಅವರು ಆಗ್ರಹಿಸಿದ್ದಾರೆ.
ಈ ಮಧ್ಯೆ ಸಂವಿಧಾನಿಕ ಸಂಸ್ಥೆಯನ್ನು ಬಿಜೆಪಿ ಕಡೆಗಣಿಸಿದೆ ಎಂದು ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪಮೊಯ್ಲಿ ಆರೋಪಿಸಿದ್ದಾರೆ.
ಬಿಜೆಪಿ ಚುನಾವಣಾ ಕಚೇರಿಯನ್ನು ಕಡೆಗಣಿಸಬಾರದು ಎಂದು ಅವರು ಒತ್ತಾಯಿಸಿದ್ದು, ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ. ಬಿಜೆಪಿ ವಿರುದ್ಧ ಬಹುಮತದಿಂದ ಗೆಲುವು ಸಾಧಿಸುತ್ತೇವೆ. ಸಮಾಜದಲ್ಲಿನ ದುರ್ಬಲ ವರ್ಗ ಯಾವಾಗಲೂ ಕಾಂಗ್ರೆಸ್ ಬೆಂಬಲಿಸಲಿದೆ ಎಂದು ಅವರು ಹೇಳಿದ್ದಾರೆ.
Advertisement