ಸಲ್ಮಾನ್ ಖಾನ್
ದೇಶ
ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆ ಪ್ರಕರಣ: ಏಪ್ರಿಲ್ 5ಕ್ಕೆ ತೀರ್ಪು
ಬಾಲಿವುಡ್ ನಟ ಸಲ್ಮಾನ್ ಖಾನ್ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ ಪ್ರಕರಣದ ವಿಚಾರಣೆಯನ್ನು....
ಜೋಧ್ ಪುರ: ಬಾಲಿವುಡ್ ನಟ ಸಲ್ಮಾನ್ ಖಾನ್ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ ಜೋಧ್ ಪುರ ಕೋರ್ಟ್, ಏಪ್ರಿಲ್ 5ರಂದು ತೀರ್ಪು ಪ್ರಕಟಿಸಲಿದೆ.
ಜೋಧಪುರ್ ಚೀಫ್ ಜ್ಯುಡಿಸಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಇಂದು ಸಲ್ಮಾನ್ ಖಾನ್ ವಿರುದ್ಧದ 20 ವರ್ಷಗಳ ಹಳೆಯ ಕೃಷ್ಣಮೃಗ ಬೇಟೆ ಪ್ರಕರಣದ ಅಂತಿಮ ತೀರ್ಪುನ್ನು ಏಫ್ರಿಲ್ 5ಕ್ಕೆ ನಿಗದಿಪಡಿಸಿದೆ.
ಅನಧಿಕೃತ ಶಸ್ತ್ರಾಸ್ತ್ರಗಳನ್ನು ಬಳಸಿ, ಅಳಿವಿನಂಚಿನಲ್ಲಿರುವ ಕೃಷ್ಣಮೃಗವನ್ನು ಕಂಕಣಿ ಗ್ರಾಮದಲ್ಲಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 13ರಿಂದ ಜೋಧ್ ಪುರ ಕೋರ್ಟ್ ನಲ್ಲಿ ಅಂತಿಮ ವಿಚಾರಣೆ ಆರಂಭವಾಗಿತ್ತು.
ಅಕ್ಟೊಬರ್ ೧, ೧೯೯೮ ರಂದು 'ಹಮ್ ಸಾಥ್ ಸಾಥ್ ಹೈ' ಸಿನೆಮಾ ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್ ಅವರು ಕೃಷ್ಣಮೃಗಗಳನ್ನು ಬೇಟೆಯಾಡಿದ್ದು, ಅವರ ಜೊತೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಅವರನ್ನು ಸಹ ಆರೋಪಿಗಳನ್ನಾಗಿ ಮಾಡಲಾಗಿದೆ.
ಕೃಷ್ಣಮೃಗ ಬೇಟೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯ್ದೆಯಡಿ ಸಲ್ಮಾನ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ