ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ : ವಿಚಾರಣೆ ಪ್ರಗತಿಯಲ್ಲಿ , ಸೂಕ್ತ ಕ್ರಮ- ಪ್ರಕಾಶ್ ಜಾವಡೇಕರ್

ಕೇಂದ್ರಿಯ ಶಿಕ್ಷಣ ಮಂಡಳಿಯ 10 ಹಾಗೂ 12 ನೇ ತರಗತಿಯ ಪ್ರಶ್ನೆಪತ್ರಿಕೆಯ ಸೋರಿಕೆ ಸಂಬಂಧ ವಿಚಾರಣೆ ಪ್ರಗತಿಯಲ್ಲಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಪ್ರಕಾಶ್ ಜಾವಡೇಕರ್
ಪ್ರಕಾಶ್ ಜಾವಡೇಕರ್

ನವದೆಹಲಿ : ಕೇಂದ್ರಿಯ ಶಿಕ್ಷಣ ಮಂಡಳಿಯ 10 ಹಾಗೂ 12 ನೇ ತರಗತಿಯ ಪ್ರಶ್ನೆಪತ್ರಿಕೆಯ ಸೋರಿಕೆ ಸಂಬಂಧ ವಿಚಾರಣೆ ಪ್ರಗತಿಯಲ್ಲಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶ್ನೆಪತ್ರಿಕೆ ಕೆಲ ಭಾಗಗಳು ವಾಟ್ಸಪ್ ಗಳಲ್ಲಿ ಸೋರಿಕೆಯಾಗಿವೆ. ಈ ಸಂಬಂಧ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ ಎಂದರು .

ಪ್ರಶ್ನೆ ಪತ್ರಿಕೆ ವಿತರಣೆ  ಸಂದರ್ಭದಲ್ಲಿ ಮತ್ತಷ್ಟು ಭದ್ರತೆ ಬಿಗಿಗೊಳಿಸಲು ನಿರ್ಧರಿಸಲಾಗಿದೆ ಎಂದು ಪ್ರಕಾಶ್ ಜಾವಡೇಕರ್ ತಿಳಿಸಿದರು.

ಪರೀಕ್ಷೆಗೂ ಮುನ್ನವೇ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ( ಸಿಬಿಎಸ್ ಇ) 10ನೇ ತರಗತಿಯ ಗಣಿತ ಮತ್ತು 12 ನೇ ತರಗತಿಯ ಅರ್ಥಶಾಸ್ತ್ರ ವಿಷಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ  ಮರು ಪರೀಕ್ಷೆ ನಡೆಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com