ಪ್ರಶ್ನೆ ಪತ್ರಿಕೆ ಸೋರಿಕೆ: ಸಿಬಿಎಸ್ ಇ 10ನೇ ತರಗತಿ ಗಣಿತ, 12ನೇ ತರಗತಿ ಅರ್ಥಶಾಸ್ತ್ರಕ್ಕೆ ಮರು ಪರೀಕ್ಷೆ

ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಕ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಕ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ) 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ವಿಷಯಕ್ಕೆ ಮರು ಪರೀಕ್ಷೆ ನಡೆಸುತ್ತಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಗಂಭೀರವಾಗಿ ಪರಿಗಣಿಸಿ, ಈ ಎರಡು ವಿಷಯಗಳಿಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಮರು ಪರೀಕ್ಷೆಯ ದಿನಾಂಕವನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸುವುದಾಗಿ ಸಿಬಿಎಸ್ ಇ ಪ್ರಕಟಣೆಯಲ್ಲಿ ತಿಳಿಸಿದೆ.
10ನೇ ತರಗತಿಯ ಗಣಿತ ಪರೀಕ್ಷೆ ಬುಧವಾರ ನಡೆದಿದ್ದು, 12ನೇ ತರಗತಿಯ ಅರ್ಥಶಾಸ್ತ್ರ ಪರೀಕ್ಷೆ ಮಾರ್ಚ್ 26ರಂದು ನಡೆದಿತ್ತು. 
ಈ ವರ್ಷ ಸುಮಾರು 28 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಬಿಎಸ್ ಇ ಪರೀಕ್ಷೆ ಬರೆಯುತ್ತಿದ್ದು, 10ನೇ ತರಗತಿ 16.38,428 ವಿದ್ಯಾರ್ಥಿಗಳು ಹಾಗೂ 12ನೇ ತರಗತಿಯ 11,86,306  ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com