ಬೆಂಕಿ ಕಾಣಿಸಿಕೊಂಡಿರುವುದು
ದೇಶ
ತಿರುಪತಿ: ತಿಮ್ಮಪ್ಪನ ಲಡ್ಡು ಮಾಡುವ ಅಡುಗೆ ಮನೆಯಲ್ಲಿ ಬೆಂಕಿ
ತಿರುಪತಿಯ ತಿರುಮಲ ದೇವಸ್ಥಾನದ ಲಡ್ಡು ತಯಾರಿಕಾ ಘಟಕದಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದ್ದು,
ತಿರುಪತಿ: ತಿರುಪತಿಯ ತಿರುಮಲ ದೇವಸ್ಥಾನದ ಲಡ್ಡು ತಯಾರಿಕಾ ಘಟಕದಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಗಳಾಗಿಲ್ಲ.
ಇಂದು ಮಧ್ಯಾಹ್ನ ತಿರುಮಲದಲ್ಲಿ ಲಡ್ಡು ತಯಾರಿಸುವ ಪ್ರಸಿದ್ಧ ಬುಂದಿ ಪೋಟು ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ ಎಲ್ಲೆಡೆ ಬೆಂಕಿ ವ್ಯಾಪಿಸಿದೆ.
ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಎರಡು ಅಗ್ನಿಶಾಮಕ ವಾಹನ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.
ಪ್ರಾಥಮಿಕ ವರದಿಗಳ ಪ್ರಕಾರ ಪ್ರಾಣಹಾನಿ ಆಗಿಲ್ಲ. ಆಸ್ತಿಪಾಸ್ತಿ ನಷ್ಟದ ಅಂದಾಜು ಇನ್ನೂ ತಿಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ