2015-17ರ ಕೋಮು ಹಿಂಸಾಚಾರದಲ್ಲಿ 300 ಮಂದಿ ಮೃತಪಟ್ಟಿದ್ದಾರೆ: ಕೇಂದ್ರ ಸರ್ಕಾರ

2015 ರಿಂದ 2017ರವರೆಗೆ ನಡೆದ ಕೋಮು ಹಿಂಸಾಚಾರದಲ್ಲಿ ಸುಮಾರು 300 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ಹೇಳಿದೆ...ಹನ್ಸ್‌ರಾಜ್ ಗಂಗಾರಾಮ್ ಅಹಿರ್
ಕೋಮು ಹಿಂಸಾಚಾರ
ಕೋಮು ಹಿಂಸಾಚಾರ
ನವದೆಹಲಿ: 2015 ರಿಂದ 2017ರವರೆಗೆ ನಡೆದ ಕೋಮು ಹಿಂಸಾಚಾರದಲ್ಲಿ ಸುಮಾರು 300 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ಹೇಳಿದೆ. 
ದೇಶಾದ್ಯಂತ 2015 ರಿಂದ 2017ರವರೆಗೆ ಮೂರು ವರ್ಷಗಳಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ಸುಮಾರು 300 ಮಂದಿ ಮೃತಪಟ್ಟಿದ್ದು ಸಾವಿರಾರು ಮಂದಿ ಗಾಯಗೊಂಡಿದ್ದರೆ ಎಂದು ಕೇಂದ್ರ ಗೃಹ ವ್ಯವಹಾರ ಸಚಿವಾಲಯದ ರಾಜ್ಯ ಸಚಿವ ಹನ್ಸ್‌ರಾಜ್ ಗಂಗಾರಾಮ್ ಅಹಿರ್ ಹೇಳಿದ್ದಾರೆ. 
2017ರಲ್ಲಿ ದೇಶಾದ್ಯಂತ 822 ಕೋಮು ಹಿಂಸಾಚಾರ ಪ್ರಕರಣಗಳು ನಡೆದಿದ್ದು ಅದರಲ್ಲಿ 111 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 2,384ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಉತ್ತರಪ್ರದೇಶದಲ್ಲಿ 195 ಕೋಮು ಹಿಂಸಾಚಾರ ಪ್ರಕರಣಗಳನ್ನು ನಡೆದಿದ್ದು ಅಲ್ಲಿ 44 ಮಂದಿ ಸಾವನ್ನಪ್ಪಿದ್ದಾರೆ. 
2016ರಲ್ಲಿ ದೇಶಾದ್ಯಂತ 703 ಕೋಮು ಹಿಂಸಾಚಾರ ಪ್ರಕರಣಗಳು ನಡೆದಿದ್ದು ಅದರಲ್ಲಿ 86 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 2,321ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಉತ್ತರಪ್ರದೇಶದಲ್ಲಿ 162 ಕೋಮು ಹಿಂಸಾಚಾರ ಪ್ರಕರಣಗಳನ್ನು ನಡೆದಿದ್ದು ಅಲ್ಲಿ 29 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ 101 ಕೋಮು ಹಿಂಸಾಚಾರ ಪ್ರಕಣಗಳು ವರದಿಯಾಗಿದ್ದು 12 ಮಂದಿ ಸಾವನ್ನಪ್ಪಿದ್ದಾರೆ. 
2015ರಲ್ಲಿ ದೇಶಾದ್ಯಂತ 751 ಕೋಮು ಹಿಂಸಾಚಾರ ಪ್ರಕರಣಗಳು ನಡೆದಿದ್ದು ಅದರಲ್ಲಿ 97 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 2,264ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಉತ್ತರಪ್ರದೇಶದಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com