ಕಾವೇರಿ ವಿವಾದ; ಆತ್ಮಹತ್ಯೆ ಬೆದರಿಕೆ ಹಾಕಿದ ಎಐಎಡಿಎಂಕೆ ಸಂಸದ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೂಚನೆಯಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡದಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಐಡಿಎಂಕೆ ಸಂಸದರೊಬ್ಬರು ಗುರುವಾರ ಕೇಂದ್ರ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ...
ಎಐಎಡಿಎಂಕೆ ಸಂಸದ ಎ. ನವನೀತಕೃಷ್ಣನ್
ಎಐಎಡಿಎಂಕೆ ಸಂಸದ ಎ. ನವನೀತಕೃಷ್ಣನ್
ಚೆನ್ನೈ: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೂಚನೆಯಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡದಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಐಡಿಎಂಕೆ ಸಂಸದರೊಬ್ಬರು ಗುರುವಾರ ಕೇಂದ್ರ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ. 
ಕಾವೇರಿ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಎಐಎಡಿಎಂಕೆ ಸಂಸದ ಎ. ನವನೀತಕೃಷ್ಣನ್ ಅವರು, ಮಾರ್ಚ್ 29ರೊಳಗಾಗಿ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡದೇ ಹೋದರೆ, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ. 
ಕಾವೇರಿ ವಿವಾದ ಕುರಿತಂತೆ ಅಂತಿಮ ಆದೇಶ ನೀಡಿದ್ದ ಸುಪ್ರೀಂಕೋರ್ಟ್, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ 6 ವಾರಗಳ ಕಾಲಾವಕಾಶವನ್ನು ಕೇಂದ್ರಕ್ಕೆ ನೀಡಿತ್ತು. ಆದರೆ, ಈ ವರೆಗೂ ಕೇಂದ್ರ ಈ ಬಗ್ಗೆ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. 
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಇ ಪಳನಿಸ್ವಾಮಿಯವರು, ಗಡುವಿನೊಳಗಾಗಿ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com