ಕಾವೇರಿ ನಿರ್ವಹಣಾ ಮಂಡಳಿ ರಚಿಸಿ; ಕೇಂದ್ರಕ್ಕೆ ನಟ ಕಮಲ್ ಹಾಸನ್ ಮನವಿ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ನಿರ್ಹವಣಾ ಮಂಡಳಿ ರಚಿಸುವಂತೆ ನಟ ಹಾಗೂ ಮಕ್ಕಳ್ ನೀಥಿ ಮಯ್ಯಮ್ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರು ಕೇಂದ್ರ ಸರ್ಕಾರಕ್ಕೆ ಗುರುವಾರ ಮನವಿ ಮಾಡಿಕೊಂಡಿದ್ದಾರೆ...
ನಟ ಹಾಗೂ ಮಕ್ಕಳ್ ನೀಥಿ ಮಯ್ಯಮ್ ಪಕ್ಷದ ಅಧ್ಯಕ್ಷ ಕಮಲ್ ಹಾಸನ್
ನಟ ಹಾಗೂ ಮಕ್ಕಳ್ ನೀಥಿ ಮಯ್ಯಮ್ ಪಕ್ಷದ ಅಧ್ಯಕ್ಷ ಕಮಲ್ ಹಾಸನ್
Updated on
ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ನಿರ್ಹವಣಾ ಮಂಡಳಿ ರಚಿಸುವಂತೆ ನಟ ಹಾಗೂ ಮಕ್ಕಳ್ ನೀಥಿ ಮಯ್ಯಮ್ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರು ಕೇಂದ್ರ ಸರ್ಕಾರಕ್ಕೆ ಗುರುವಾರ ಮನವಿ ಮಾಡಿಕೊಂಡಿದ್ದಾರೆ. 
ಕಾವೇರಿ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಧಾನಮಂತ್ರಿಗಳ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ದಯವಿಟ್ಟು ಕಾವೇರಿ ನಿರ್ವಹಣಾ ಮಂಡಳಿಯನ್ನು ರಚನೆ ಮಾಡಿ. ನಿರ್ವಹಣಾ ಮಂಡಳಿ ರಚನೆ ಮಾಡುವ ಅಧಿಕಾರ ನಿಮಗಿದೆ. ನೀವು ಮಾಡಲೇಬೇಕು ಎಂದು ಹೇಳಿದ್ದಾರೆ. 
ನಿರ್ವಹಣಾ ಮಂಡಳಿ ರಚನೆ ಮಾಡಬೇಕೆಂದು ಬಯಸಿದಿರೆ ಪ್ರಧಾನಿ ಮೋದಿಯವರು ಸುಲಭವಾಗಿ ಮಾಡಬಹುದು. ತಮಿಳುನಾಡು ಜನತೆಗೆ ಹಾಗೂ ರೈತರಿಗೆ ನೀರಿನ ಅಗತ್ಯವಿದೆ ಎಂದು ತಿಳಿಸಿದ್ದಾರೆ. 
ಕರ್ನಾಟಕ ರಾಜ್ಯವು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಸಂಬಂಧ ಯೋಜನೆ ರೂಪಿಸಬೇಕು ಎಂಬ ಸುಪ್ರೀಂಕೋರ್ಟ್ ಗಡುವು ಮಾ.29ಕ್ಕೆ ಮುಗಿದಿದೆ. ಆದರೂ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತಂತೆ ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಂಡಿಲ್ಲ. ಹೀಗಾಗಿ ತಮಿಳುನಾಡು ಸರ್ಕಾರ ಕೇಂದ್ರದ ವಿರುದ್ಧ ತೀವ್ರ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com