ಕಾವೇರಿ ವಿವಾದ ಎಎಐಎಡಿಎಂಕೆ ಸಂಸದ ಎಸ್ ಆರ್ ಮುತ್ತುಕರುಪ್ಪನ್ ರಾಜೀನಾಮೆಗೆ ಮುಂದು

ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಅನುಷ್ಠಾನಗೊಳಿಸುವಲ್ಲಿ ಕೇಂದ್ರಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಸಂಸದ ಎಸ್ ಆರ್ ಮುತ್ತುಕರುಪ್ಪನ್ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ : ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಅನುಷ್ಠಾನಗೊಳಿಸುವಲ್ಲಿ ಕೇಂದ್ರಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಸಂಸದ ಎಸ್ ಆರ್ ಮುತ್ತುಕರುಪ್ಪನ್  ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.

ಇದು ನನ್ನ ವೈಯಕ್ತಿಕ ನಿರ್ಧಾರವಾಗಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರಸರ್ಕಾರ ವಿರುದ್ಧ ಪ್ರತಿಭಟನೆಗಾಗಿ ರಾಜೀನಾಮೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಕಾವೇರಿ ವಿಚಾರ ಕುರಿತು ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರಮೋದಿ ತಿರಸ್ಕರಿಸುತ್ತಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದ್ದಾರೆ.

ಮುತ್ತುಕರುಪ್ಪನ್, ಅವರ ಆರು ವರ್ಷಗಳ ಅವಧಿಯಲ್ಲಿ ಇನ್ನೂ ಎರಡು ವರ್ಷ ಬಾಕಿ ಇದೆ. ಕೆಲ ದಿನಗಳಲ್ಲಿಯೇ ರಾಜ್ಯಸಭೆಯ ಸಭಾಪತಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.



ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com