ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಗಂಭೀರವಾಗಿ ಪರಿಗಣಿಸಿ: ಶೀಲಾ ದೀಕ್ಷಿತ್

ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಹಗುರವಾಗಿ ತೆಗೆದುಕೊಳ್ಳುವಂತಿಲ್ಲ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹೇಳಿದ್ದಾರೆ....
ಶೀಲಾ ದೀಕ್ಷಿತ್
ಶೀಲಾ ದೀಕ್ಷಿತ್
ನವದೆಹಲಿ: ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಹಗುರವಾಗಿ ತೆಗೆದುಕೊಳ್ಳುವಂತಿಲ್ಲ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹೇಳಿದ್ದಾರೆ.
ಇದೊಂದು ಗಂಭೀರ ವಿಚಾರ , ಹೀಗಾಗಿ ಹಗುರವಾಗಿ ಪರಿಗಣಿಸಬೇಡಿ ಎಂದು ಸಲಹೆ ನೀಡಿರುವ ಅವರು, ಪ್ರಕರಣ ಕುರಿತು ಗಂಭೀರ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಹೇಗೆ ಸೋರಿಕೆಯಾಯಿತು ಎಂಬದನ್ನು ತನಿಖೆ ಮೂಲಕ ಕಂಡು ಹಿಡಿದರೇ ಭವಿಷ್ಯದಲ್ಲಿ ಈ ರೀತಿಯ ತಪ್ಪುಗಳಾಗುವುದಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. 
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್'ಸಿ)ಯ 10ನೇ ತರಗತಿ ಗಣಿತ ಮತ್ತು 12ನೇ ತರಗತಿಗೆ ಮಾರ್ಚ್ 26 ಮತ್ತು ಮಾರ್ಚ್ 28 ರಂದು ನಡೆದ ಪರೀಕ್ಷೆ ವೇಳೆ ಗಣಿತ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದವು.
ಪ್ರಶ್ನೆಪತ್ರಿಕೆ ಸೋರಿಕೆ ಕುರಿತಂತೆ ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೊನೆಗೂ ಮಂಡಳಿಯ ಮುಖ್ಯಸ್ಥೆ ಅನಿತಾ ಕರ್ವಾಲ್ ಅವರು ಮೌನ ಮುರಿದ್ದು, ಮರುಪರೀಕ್ಷೆ ವಿದ್ಯಾರ್ಥಿಗಳ ಹಿತಾಸಕ್ತಿಯಿಂದ ಮಾಡುತ್ತಿದ್ದೇವೆ. ಹೊಸ ದಿನಾಂಕಗಳನ್ನು ಶೀಘ್ರವೇ ಘೋಷಿಸಲಾಗುತ್ತದೆ ಎಂದು ಹೇಳಿದ್ದಾರೆ. ಸೋಮವಾರ ಅಥವಾ ಮಂಗಳವಾ ದಿನಾಂಕ ಘೋಷಣೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com