ಕರ್ನಾಟಕ ರಾಜ್ಯವು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಸಂಬಂಧ ಯೋಜನೆ ರೂಪಿಸಬೇಕು ಎಂಬ ಸುಪ್ರೀಂಕೋರ್ಟ್ ಗಡುವು ಮಾ.29ಕ್ಕೆ ಮುಗಿದಿದೆ. ಆದರೂ ಕಾವೇರಿ ನಿರ್ವಹಣ ಮಂಡಳಿ ರಚನೆ ಕುರಿತಂತೆ ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಂಡಿಲ್ಲ. ಹೀಗಾಗಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಹಾಗೂ ಮಂತ್ರಿಮಂಡಲದ ಸದಸ್ಯರು ಮುಂದಿನ ಹಂತದ ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದು, ಚರ್ಚೆ ಕುರಿತಂತೆ ಈವರೆಗೂ ನಿರ್ಧಾರವನ್ನು ಪ್ರಕಟಿಸಿಲ್ಲ.