

ಚೆನ್ನೈ : ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ತಮಿಳುನಾಡು ಮೀನುಗಾರಿಕೆ ಸಚಿವ ಡಿ. ಜಯಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.
ಯಾವ ರೀತಿಯ ಮೇಲ್ಮನವಿ ಸಲ್ಲಿಸಲಾಗುವುದು ಎಂಬ ಬಗ್ಗೆ ಸ್ಪಷ್ಪಪಡಿಸದ ಜಯಕುಮಾರ್, ಈ ವಿವಾದ ಕುರಿತಂತೆ ಸರ್ಕಾರ ಚರ್ಚೆ ನಡೆಸಿದ್ದು, ಸುಪ್ರೀಂಕೋರ್ಟಿನಲ್ಲಿ ಒತ್ತಾಯಪಡಿಸಲಾಗುವುದು . ಆದರೆ. ಮೇಲ್ಮನವಿ ಸ್ವರೂಪ ಹೇಳಲಿಕೆ ಆಗುವುದಿಲ್ಲ ಎಂದರು.
ಈ ಸಂಬಂಧ ಮುಂದೆ ಕೈಗೊಳ್ಳಬಹುದಾದ ಕಾನೂನು ಕ್ರಮಕ್ಕಾಗಿ ಮುಖ್ಯಮಂತ್ರಿ ಇ. ಕೆ. ಪಳನಿಸ್ವಾಮಿ ಅಧ್ಯಕ್ಷತೆಯಲ್ಲಿ ನಿನ್ನೆ ಸಭೆ ನಡೆಸಲಾಗಿದೆ. ಆರು ವಾರಗಳಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
ಕೇಂದ್ರಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ರಚಿಸಬೇಕೆಂದು ತಮಿಳುನಾಡಿನ ಬೇಡಿಕೆಯಾಗಿದೆ ಎಂದು ಅವರು ಸ್ಪಷ್ಪಪಡಿಸಿದರು.