ಸಾಂದರ್ಭಿಕ ಚಿತ್ರ
ದೇಶ
ಪ್ಯಾನ್ ಗೆ ಆಧಾರ್ ಲಿಂಕ್ ಗಡುವು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ
ಕೇಂದ್ರ ಸರ್ಕಾರ ಈ ಹಿಂದೆ ಪ್ಯಾನ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಲು ನೀಡಿದ್ಧ ಮಾರ್ಚ್ 31ರ ಗಡುವನ್ನು...
ನವದೆಹಲಿ: ಕೇಂದ್ರ ಸರ್ಕಾರ ಈ ಹಿಂದೆ ಪ್ಯಾನ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಲು ನೀಡಿದ್ಧ ಮಾರ್ಚ್ 31ರ ಗಡುವನ್ನು ಶನಿವಾರ ಅನಿರ್ಧಿಷ್ಟಾವಧಿಗೆ ಮುಂದೂಡಿದೆ.
ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಆಧಾರ್ ಅನ್ನು ಪ್ಯಾನ್ ಮತ್ತು ಬ್ಯಾಂಕ್ ಖಾತೆಗೆ ಜೋಡಣೆ ಮಾಡುವ ಅಂತಿಮ ದಿನಾಂಕವನ್ನು ಅನಿರ್ಧಿಷ್ಟಾವಧಿಗೆ ಮುಂದೂಡುಲಾಗಿದೆ ಎಂದು ಹಣಕಾಸು ಸಚಿವಾಲಯ ಅಧಿಸೂಚನೆ ಹೊರಡಸಿದೆ. ಅಲ್ಲದೆ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಅಂತಿಮ ದಿನಾಂಕ ಘೋಷಿಸುವುದಾಗಿ ತಿಳಿಸಿದೆ.
ಇತ್ತೀಚೆಗೆ ಸುಪ್ರೀಂ ಕೋರ್ಟ್ ನಾನಾ ಸೇವೆಗಳನ್ನು ಪಡೆಯಲು ಆಧಾರ್ ಲಿಂಕ್ ಮಾಡಲು ಮಾರ್ಚ್ 31ರ ಗಡುವನ್ನು ರದ್ದುಪಡಿಸಿದ್ದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗಿದೆ.
ಮಾರ್ಚ್ 5ರ ವೇಳೆಗೆ ಒಟ್ಟು 33 ಕೋಟಿ ಪಾನ್ ಕಾರ್ಡ್‌ಗಳ ಪೈಕಿ 16.65 ಕೋಟಿ ಪ್ಯಾನ್ ಸಂಖ್ಯೆ ಆಧಾರ್ ಜತೆ ಲಿಂಕ್ ಆಗಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ