ನವದೆಹಲಿ: ಸಿಬಿಎಸ್ಇಯ 10, 12 ನೇ ತರಗತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸಿದ್ದ ಸಿಬಿಎಸ್ಇ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಮಾನವ ಸಂಪನ್ಮೂಲ ಇಲಾಖೆ ಅಮಾನತು ಆದೇಶ ಹೊರಡಿಸಿದ್ದು, ಕೆಎಸ್ ರಾಣಾ ಎಂಬ ಅಧಿಕಾರಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದ್ದು ತನಿಖೆಗೆ ಆದೇಶಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ಪ್ರಾಧ್ಯಾಪಕರು ಹಾಗೂ ಓರ್ವ ಕೋಚಿಂಗ್ ಇನ್ಸ್ಟಿಟ್ಯೂಟ್ ಮುಖ್ಯಸ್ಥರನ್ನು ಬಂಧಿಸಲಾಗಿದ್ದು, ಸೋರಿಕೆಯಾಗದಂತೆ ಎಚ್ಚರ ವಹಿಸಬೇಕಿದ್ದ ಅಧಿಕಾರಿ ರಾಣಾ ಕರ್ತವ್ಯ ಲೋಪ ಎಸಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.