ಮಕ್ಕಳ ಮೇಲೆ ಅತ್ಯಾಚಾರ : ಕ್ಷಿಪ್ರಗತಿಯ ವಿಚಾರಣೆಗೆ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ಆದೇಶ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ವಿಚಾರಣೆಯನ್ನು ಕ್ಷಿಪ್ರಗತಿಯಲ್ಲಿ ನಡೆಸುವಂತೆ ಎಲ್ಲಾ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ :  ಮಕ್ಕಳ ಮೇಲಿನ ಲೈಂಗಿಕ  ದೌರ್ಜನ್ಯ ಪ್ರಕರಣಗಳ ವಿಚಾರಣೆಯನ್ನು   ಕ್ಷಿಪ್ರಗತಿಯಲ್ಲಿ  ನಡೆಸುವಂತೆ ಎಲ್ಲಾ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ಅವರನ್ನೊಳಗೊಂಡ  ತ್ರಿ ಸದಸ್ಯ ಪೀಠ ಈ  ಆದೇಶ ನೀಡಿದ್ದು, ವಿಶೇಷ  ನ್ಯಾಯಾಲಯಗಳ ಮೂಲಕ ಕ್ಷಿಪ್ರಗತಿಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಿಚಾರಣೆ ನಡೆಸುವಂತೆ ಅವರು ಆದೇಶಿಸಿದ್ದಾರೆ.

ಪೋಕ್ಸೋ ಕಾಯ್ದೆಯಡಿ ವಿಚಾರಣೆ ನಡೆಸುವಾಗ ಅನಗತ್ಯ ತೀರ್ಪು ನೀಡದಂತೆ ವಿಚಾರಣಾ ನ್ಯಾಯಾಲಯಗಳಿಗೆ ಸೂಚಿಸುವಂತೆ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

 ವಕೀಲ ಅಲಾಕ್ ಅಲೊಕ್ ಶ್ರೀವಾಸ್ತವ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಎ.ಎಂ. ಖನ್ವೀಲ್ ಕರ್ ಮತ್ತು ಡಿ. ವೈ. ಚಂದ್ರಚೂಡ ಅವರಿದ್ಧ ನ್ಯಾಯುಪೀಠ, ಇಂತಹ ಪ್ರಕರಣಗಳ ವಿಚಾರಣೆಗಾಗಿ ಮೂವರು ನ್ಯಾಯಾಧೀಶರನ್ನೊಳಗೊಂಡ ವಿಚಾರಣಾ ಸಮಿತಿಯನ್ನು ಸ್ಥಾಪಿಸುವಂತೆಯೂ ಹೈಕೋರ್ಟ್ ಗೆ ತಿಳಿಸಿದೆ.

ದೆಹಲಿಯಲ್ಲಿ  ಜ. 28 ರಂದು 8 ತಿಂಗಳ ಬಾಲಕಿ ಮೇಲೆ 28 ವರ್ಷದ ಸಂಬಂಧಿ ಅತ್ಯಾಚಾರ ನಡೆಸಿದ್ದ ನಂತರ ಶ್ರೀವಾಸ್ತವ ಅವರು ನ್ಯಾಯಾಲಯಕ್ಕೆ ಸಾರ್ವಜನಿಕ ಅರ್ಜಿ ಸಲ್ಲಿಸಿದ್ದರು.  12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಯನ್ನು ಕೇಂದ್ರಸರ್ಕಾರ ಜಾರಿಗೊಳಿಸಿದೆ.



ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com