ಮೊತಿಹರಿ: ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊತಿಹರಿ ಪಟ್ಟಣದಲ್ಲಿ ಖಾಸಗಿ ಬಸ್ಸೊಂದು ರಸ್ತೆಯಿಂದ ಕೆಳಗೆ ಉರಿಳಿ ಬಿದ್ದು, ಬಳಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 27 ಪ್ರಯಾಣಿಕರು ಸಜೀವ ದಹನವಾಗಿರುವ ದಾರುಣ ಘಟನೆ ಗುರುವಾರ ನಡೆದಿದೆ.
ಇಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 27 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಸಚಿವ ದಿನೇಶ್ ಚಂದ್ರ ಯಾದವ್ ಅವರು ತಿಳಿಸಿದ್ದಾರೆ.
ಬಸ್ಸಿನಲ್ಲಿ ಒಟ್ಟು 32 ಪ್ರಯಾಣಿಕರಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೈಕ್ ಅನ್ನು ರಕ್ಷಿಸಲು ಹೋಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ಕೊಟ್ವಾ ಪೊಲೀಸ್ ಠಾಣಾ ಅಧಿಕಾರಿ ವಿಜಯ್ ಸಿನ್ಹಾ ಅವರು ತಿಳಿಸಿದ್ದಾರೆ.