ಕಾವೇರಿ ನಿರ್ವಹಣಾ ಮಂಡಳಿ ಕರಡು ಪ್ರತಿಗೆ ಸಚಿವ ಸಂಪುಟದ ಅನುಮೋದನೆ ಬೇಕು: ಸುಪ್ರೀಂಗೆ ಅಟಾರ್ನಿ ಜನರಲ್ ಹೇಳಿಕೆ
ಪ್ರಧಾನಿ ಮೋದಿ ಸೇರಿದಂತೆ ಹಲವು ಸಚಿವರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆಟಾರ್ನಿ ಜನರಲ್ ಕೆಕೆ ವೇಣು ಗೋಪಾಲ್ ಅವರು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.

Published On :
ನವದೆಹಲಿ: ಕಾವೇರಿ ನಿರ್ವಹಣಾ ಮಂಡಳಿ ಕರಡು ಪ್ರತಿಯನ್ನು ಸಟಿವ ಸಂಪುಟ ಅನುಮೋದನೆಗೆ ರವಾನಿಸಬೇಕು, ಆದರೆ ಪ್ರಧಾನಿ ಮೋದಿ ಸೇರಿದಂತೆ ಹಲವು ಸಚಿವರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆಟಾರ್ನಿ ಜನರಲ್ ಕೆಕೆ ವೇಣು ಗೋಪಾಲ್ ಅವರು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
ಇಂದು ನಡೆದ ಕಾವೇರಿ ವಿವಾದ ಸಂಬಂಧ ವಿಚಾರಣೆಯಲ್ಲಿ ಭಾಗಿಯಾಗಿದ್ದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ವಸ್ತುಸ್ಥಿತಿಗತಿ ವರದಿ ನೀಡಿದರು. ಈ ವೇಳೆ ಕಾವೇರಿ ನಿರ್ವಹಣಾ ಮಂಡಳಿ ಕರಡು ಪ್ರತಿ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಿದ ವೇಣುಗೋಪಾಲ್ ಅವರು, ಕರಡು ಪ್ರತಿಯನ್ನು ಸಚಿವ ಸಂಪುಟಕ್ಕೆ ರವಾನೆ ಮಾಡಿ ಸಂಪುಟದ ಅನುಮೋದನೆ ಪಡೆಯಬೇಕು.
ಆದರೆ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆಲ ಸಚಿವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಕರಡು ಪ್ರತಿ ಅನುಮೋದನೆ ವಿಳಂಬವಾಗುತ್ತಿದೆ ಎಂದು ಅಟಾರ್ನಿ ಜನರಲ್ ವೇಣುಗೋಪಾಲ್ ಮಾಹಿತಿ ನೀಡಿದರು.
ಇದಕ್ಕೂ ಮೊದಲು ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಅಂತೆಯೇ ಈ ಸಂಬಂಧ ಅಫಿಡವಿಟ್ ಸಲ್ಲಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕ ಸೂಚನೆ ನೀಡಿ, ವಿಚಾರಣೆಯನ್ನು ಮೇ 8ಕ್ಕೆ ಮುಂದೂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtತಮಿಳುನಾಡುನವದೆಹಲಿNew DelhiTamil NaduKarnatakaಕರ್ನಾಟಕಸುಪ್ರೀಂ ಕೋರ್ಟ್ಕಾವೇರಿ ವಿವಾದCauvery row
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


