ದೇಶ

ಕಾವೇರಿ ವಿವಾದ: ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ 'ಸುಪ್ರೀಂ' ಆದೇಶ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ವಿಚಾರಣೆಯಲ್ಲಿ ತಮಿಳುನಾಡಿಗೆ 4 ಟಿಎಂಸಿ ನೀರನ್ನು ಬಿಡುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ.

ಕಾವೇರಿ ವಿವಾದ: ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ 'ಸುಪ್ರೀಂ' ಆದೇಶ
ಸಂಗ್ರಹ ಚಿತ್ರ
Published On :
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ವಿಚಾರಣೆಯಲ್ಲಿ ತಮಿಳುನಾಡಿಗೆ 4 ಟಿಎಂಸಿ ನೀರನ್ನು ಬಿಡುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ.
ಕಾವೇರಿ ನೀರು ಬಿಡುವ ವಿಚಾರ ಸಂಬಂಧ ತಮಿಳುನಾಡು ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಅವರು, ಕೂಡಲೇ ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಆದೇಶ ನೀಡಿದ್ದಾರೆ. ಅಲ್ಲದೆ ನೀರು ಬಿಡುಗಡೆಗೆ 10 ದಿನಗಳ ಕಾಲಾವಕಾಶ ನೀಡಿದ್ದು, ಕನಿಷ್ಛ ಪಕ್ಷ 2 ಟಿಎಂಸಿ ನೀರನ್ನಾದರೂ ಕರ್ನಾಟಕ ಬಿಡುಗಡೆ ಮಾಡಲೇಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಅಂತೆಯೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಕೆ ಮಾಡುವಂತೆಯೂ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗೆ ಸೂಚನೆ ನೀಡಿದೆ. ಇನ್ನು ಪ್ರಕರಣದ ವಿಚಾರಣೆಯನ್ನು ಮೇ 8ಕ್ಕೆ ಮುಂದೂಡಿಕೆ ಮಾಡಿದೆ.
ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಂಬಂಧಿಸಿ ವಿಚಾರಣೆ ನಡೆಯುತ್ತಿರುವ ವೇಳೆ ತಮಿಳು ನಾಡು ಸರ್ಕಾರದ ಪರ ವಕೀಲರು ಏಕಾಏಕಿ ಕುಡಿಯಲು ನೀರು ಬೇಕು ಎಂದು  ಮನವಿ ಸಲ್ಲಿಸಿದ್ದಾರೆ. ಮನವಿ ಆಧರಿಸಿ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರು 4 ಟಿಎಂಸಿ ನೀರು ಬಿಡಬೇಕು ಎಂದು ಆದೇಶ ನೀಡಿದ್ದಾರೆ. ಕೋರ್ಟ್‌ ಈ ಬಗ್ಗೆ ಮಧ್ಯಾಹ್ನ ಲಿಖಿತ ಆದೇಶ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.
ರಾಜ್ಯದ ವಕೀಲರು ಆದೇಶಕ್ಕೆ ಉತ್ತರಿಸಿದ್ದು, ನಮ್ಮಲ್ಲಿ ಕುಡಿಯುವ ನೀರಿಗೂ ತತ್ವಾರ ಇದೆ . ಇಷ್ಟು ಪ್ರಮಾಣದ ನೀರು ಬಿಡಲು ಸಾಧ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.