ಸಾಮೂಹಿಕ ಅತ್ಯಾಚಾರ : ಗಲ್ಲು ಶಿಕ್ಷೆ ಪುನರ್ ಪರಿಶೀಲನೆ ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

ಡಿಸೆಂಬರ್ 16, 2012 ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಧಿಸಿರುವ ಗಲ್ಲುಶಿಕ್ಷೆ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತೀರ್ಪುನ್ನು ಕಾಯ್ದಿರಿಸಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ : ಡಿಸೆಂಬರ್ 16, 2012 ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಧಿಸಲಾಗಿರುವ ಗಲ್ಲುಶಿಕ್ಷೆ ಪುನರ್ ಪರಿಶೀಲಿಸುವಂತೆ ಇಬ್ಬರು ಆರೋಪಿಗಳು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ನಿರ್ಭಯಾ ಮೇಲೆ ಅತ್ಯಾಚಾರ ನಡೆಸಿದ  ಆರೋಪಿಗಳು , ಗಲ್ಲು ಶಿಕ್ಷೆ ತೀರ್ಪು ಪುನರ್ ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

2012ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಮಹಿಳೆ ಮೇಲಿನ ಅತ್ಯಾಚಾರಗಳಿಗೆ ಕಠಿಣ ಕಾನೂನು ರೂಪಿಸುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿತ್ತು.

ಈ ಸಂಬಂಧ ಮಾರ್ಚ್ ತಿಂಗಳಲ್ಲಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ನೇತೃತ್ವದ ಪೀಠ, ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಮತ್ತೆ ಅರ್ಜಿ ವಿಚಾರಣೆ ನಡೆದಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ.


 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com