

ಜಾರ್ಖಂಡ್ : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬಳಿಕ ಕೊಲೆಗೈದಿದ್ದ 14 ಮಂದಿ ಆರೋಪಿಗಳನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ.
16 ವರ್ಷದ ಬಾಲಕಿ ಮೇಲೆ ಅವರ ಮನೆಯಲ್ಲಿಯೇ ಅತ್ಯಾಚಾರ ನಡೆಸಿದ ಆರೋಪಿಗಳು , ನಂತರ ಆಕೆಯನ್ನು ಸುಟ್ಟು ಹಾಕಿ ಕ್ರೌರ್ಯ ಮೆರೆದಿದ್ದರು. ನಕ್ಸಲ್ ಪೀಡಿತ ಚಾತ್ರಾ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿತ್ತು.
ಮದ್ಯದ ನಶೆಯಲ್ಲಿದ್ದ ನಾಲ್ವರು ಆರೋಪಿಗಳು ಮನೆಯಿಂದ ಅಪಹರಿಸಿಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ಮೃತ ಬಾಲಕಿಯ ಕುಟುಂಬ ಸದಸ್ಯರು ಹೇಳಿದ್ದಾರೆ.