ದೇಶ

ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಅಮಿತ್ ಶಾ, ರಾಹುಲ್ ವಿರುದ್ಧ ಕಿಡಿ

ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಅಮಿತ್ ಶಾ, ರಾಹುಲ್ ವಿರುದ್ಧ ಕಿಡಿ
ಅಮಿತ್ ಶಾ
Published On :
ಭೋಪಾಲ್: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ. 
2018ರ ಮಧ್ಯಪ್ರದೇಶ ಚುನಾವಣೆ ಮತ್ತು 2019ರ ಲೋಕಸಭಾ ಚುನಾವಣೆ ಹಿನ್ನೆಲೆ ಇಂದಿನಿಂದಲೇ ಅಮಿತ್ ಶಾ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದು ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. 
ಭೋಪಾಲದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಮುಂಬರುವ ಚುನಾವಣೆಗಳಲ್ಲಿ ರಾಹುಲ್ ಗಾಂಧಿ ಬೈನೋಕ್ಯುಲರ್ ಬಳಸಿದರು ಕಾಂಗ್ರೆಸ್ ಜಯಶಾಲಿಯಾಗುವುದನ್ನು ಕಾಣಲು ಸಾಧ್ಯವಿಲ್ಲ. ಈ ಬಗ್ಗೆ ರಾಹುಲ್ ಜೀ ಹೇಗೆ ಕನಸು ಕಾಣಬಹುದು ಎಂದು ನಾನು ಆಶ್ಚರ್ಯ ಪಡುತ್ತಿದ್ದೇನೆ ಎಂದರು. 
ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಬಿಜೆಪಿ ರೈತರು ಮತ್ತು ಬಡವರ ಪರವಾಗಿ ನಿಂತಿದೆ. ಆದರೆ ಕಾಂಗ್ರೆಸ್ ಸಾಂಸ್ಥಿಕ ಹಿತಾಸಕ್ತಿಗೆ ಸಮಾನಾರ್ಥಕವಾಗಿದೆ ಎಂದರು. 
ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರ ಬಡವರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದು 2019ರ ಲೋಕಸಬಾ ಚುನಾವಣೆಯಲ್ಲಿ ರಾಜ್ಯದಲ್ಲಿ 29 ಸೀಟುಗಳನ್ನು ಗೆಲ್ಲುತ್ತೇನೆ ಎಂದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.