ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಎನ್'ಕೌಂಟರ್; ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಎನ್ ಕೌಂಟರ್ ನಡೆಸುತ್ತಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ಭಾನುವಾರ ತಿಳಿದುಬಂದಿದೆ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಎನ್ ಕೌಂಟರ್ ನಡೆಸುತ್ತಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ಭಾನುವಾರ ತಿಳಿದುಬಂದಿದೆ.
ಬದಿಗಾಮ್ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ದೊರಕಿದ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದು, ಕಾರ್ಯಾಚರಣೆ ಆರಂಭಿಸಿದ್ದವು.
ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಯೋಧ ಹಾಗೂ ಓರ್ವ ಪೊಲೀಸ್ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ಗಾಯಾಗೊಂಡ ಯೋಧ ಹಾಗೂ ಪೇದೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.