ಜಮ್ಮು-ಕಾಶ್ಮೀರ, ಅಸ್ಸಾಂ, ನಾಗಾಲ್ಯಾಂಡ್ ನಲ್ಲಿ ಸೇನೆಗೆ ನೀಡಿರುವ ವಿಶೇಷ ಅಧಿಕಾರ ವಾಪಸ್?: ಕೇಂದ್ರ ಹೇಳಿದ್ದೇನು?

ಮೇಘಾಲಯದಲ್ಲಿ ಸೇನಾ ಪಡೆಗೆ ನೀಡಲಾಗಿದ್ದ ವಿಶೇಷ ಅಧಿಕಾರ (AFSPA)ವನ್ನು ಸಂಪೂರ್ಣವಾಗಿ ಹಿಂಪಡೆದು, ಅರುಣಾಚಲ ಪ್ರದೇಶದಲ್ಲಿ ಭಾಗಶಃ ನಿರ್ಬಂಧ ವಿಧಿಸಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಜಮ್ಮು-
ಜಮ್ಮು-ಕಾಶ್ಮೀರ, ಅಸ್ಸಾಂ, ನಾಗಾಲ್ಯಾಂಡ್ ನಲ್ಲಿ ಸೇನೆಗೆ ನೀಡಿರುವ ವಿಶೇಷ ಅಧಿಕಾರ ವಾಪಸ್?: ಕೇಂದ್ರ ಹೇಳಿದ್ದೇನು?
ಜಮ್ಮು-ಕಾಶ್ಮೀರ, ಅಸ್ಸಾಂ, ನಾಗಾಲ್ಯಾಂಡ್ ನಲ್ಲಿ ಸೇನೆಗೆ ನೀಡಿರುವ ವಿಶೇಷ ಅಧಿಕಾರ ವಾಪಸ್?: ಕೇಂದ್ರ ಹೇಳಿದ್ದೇನು?
ನವದೆಹಲಿ: ಮೇಘಾಲಯದಲ್ಲಿ ಸೇನಾ ಪಡೆಗೆ ನೀಡಲಾಗಿದ್ದ ವಿಶೇಷ ಅಧಿಕಾರ (AFSPA)ವನ್ನು ಸಂಪೂರ್ಣವಾಗಿ ಹಿಂಪಡೆದು, ಅರುಣಾಚಲ ಪ್ರದೇಶದಲ್ಲಿ ಭಾಗಶಃ ನಿರ್ಬಂಧ ವಿಧಿಸಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರ, ಅಸ್ಸಾಂ, ನಾಗಾಲ್ಯಾಂಡ್ ಗಳಲ್ಲಿಯೂ ಸೇನೆಗೆ ನೀಡಿರುವ ವಿಶೇಷ ಅಧಿಕಾರವನ್ನು ಹಿಂಪಡೆಯುವ ಬಗ್ಗೆ ಪ್ರತಿಕ್ರಿಯೆ ನೀಡಿದೆ. 
ಜಮ್ಮು-ಕಾಶ್ಮೀರ, ಅಸ್ಸಾಂ, ನಾಗಾಲ್ಯಾಂಡ್ ಗಳಲ್ಲಿ ಪರಿಸ್ಥಿತಿ ಸುಧಾರಿಸಿದರೆ ಅಲ್ಲಿಯೂ ಸೇನೆಗೆ ನೀಡಿರುವ ವಿಶೇಷ ಅಧಿಕಾರವನ್ನು ಹಿಂಪಡೆಯಬಹುದು ಎಂದು ಕೆಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ನಾಗಾಲ್ಯಾಂಡ್ ನಲ್ಲಿ ನಾಗಾ ಶಾಂತಿ ಮಾತುಕತೆ ಮುಂದುವರೆಯುತ್ತಿದ್ದು ಫಲಿತಾಂಶ ಸಕಾರಾತ್ಮಕವಾಗಿರಲಿದೆ ಎಂದು ಕಿರಣ್ ರಿಜಿಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಈಶಾನ್ಯ ರಾಜ್ಯಗಳಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ, ಭದ್ರತಾ ಪರಿಸ್ಥಿತಿ ಸುಧಾರಣೆ ಕಾಣುತ್ತಿರುವ ಪ್ರದೇಶಗಳಲ್ಲಿ ಸೇನೆಗೆ ನೀಡಲಾಗಿರುವ ವಿಶೇಷ ಅಧಿಕಾರವನ್ನು ವಾಪಸ್ ಪಡೆಯಲಾಗಿದೆ , ಇನ್ನೂ ಕೆಲವು ಪ್ರದೇಶಗಳಲ್ಲಿ ಸಧ್ಯದಲ್ಲೇ ಸೇನೆಗೆ ನೀಡಲಾಗಿರುವ ವಿಶೇಷ ಅಧಿಕಾರವನ್ನು ವಾಪಸ್ ಪಡೆಯಲಾಗುವುದು, ಜಮ್ಮು-ಕಾಶ್ಮೀರ, ಅಸ್ಸಾಂ, ನಾಗಾಲ್ಯಾಂಡ್ ಗಳಲ್ಲಿ ಪರಿಸ್ಥಿತಿ ಸುಧಾರಣೆಯಾದರೆ ಸೇನೆಗೆ ನೀಡಿರುವ ವಿಶೇಷ ಅಧಿಕಾರವನ್ನು ಹಿಂಪಡೆಯಲಾಗುವುದು ಎಂದು  ಕಿರಣ್ ರಿಜಿಜು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com