

ನವದೆಹಲಿ: ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣದ ಅಂತಿಮ ವರದಿಯನ್ನು ವಾರದೊಳಗೆ ಸುಪ್ರೀಂಕೋರ್ಟ್ ಗೆ ಸಲ್ಲಿಸುವುದಾಗಿ ದೆಹಲಿ ಪೊಲೀಸರು ಹೇಳಿದ್ದಾರೆ.
ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಬೇಕಾದ್ದರೆ ಹೆಚ್ಚಿನ ವೇಳೆ ತೆಗೆದುಕೊಳ್ಳಬಹುದು ಎಂದು ಗೃಹ ಸಚಿವಾಲಯ ಹೇಳಿದೆ.
ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಪತ್ನಿಯಾಗಿರುವ ಸುನಂದಾ ಪುಷ್ಕರ್ 2014 ಜನವರಿ 17 ರಂದು ದೆಹಲಿಯ ಪಂಚತಾರಾ ಹೋಟೆಲ್ ವೊಂದರಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪಿದ್ದರು.
ಸುನಂದಾ ಪುಷ್ಕರ್ ಸಾವಿನ ನಂತರವೇ ತಾವೂ ನೋಡಿರುವುದಾಗಿ ಶಶಿ ತರೂರ್ ಫೆಬ್ರವರಿ 23 ರಂದು ಹೇಳಿಕೆ ನೀಡಿದ್ದರು.
ಸುನಂದಾ ಪುಷ್ಕರ್ ಸಾವಿನ ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕೆಂಬ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ವಜಾಗೊಳಿಸಿ ದೆಹಲಿ ಪೊಲೀಸರಿಗೆ
ಸುನಂದಾ ಅವರ ಸಾವಿನ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ತನಿಖೆ ನಡೆಸಬೇಕೆಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಸುಬ್ರಮಣ್ಯನ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.