ಪ.ಬಂಗಾಳ ಪಂಚಾಯ್ತಿ ಚುನಾವಣೆ: ಇ-ಮೇಲ್ ಮೂಲಕ ನಾಮಪತ್ರ ಸಲ್ಲಿಸಲು ಹೈಕೋರ್ಟ್ ಅನುಮತಿ

ಪಶ್ಚಿಮ ಬಂಗಾಳ ಪಂಚಾಯ್ತಿ ಚುನಾವಣೆಗಾಗಿ ಅಭ್ಯರ್ಥಿಗಳು ಇ-ಮೇಲ್ ಮೂಲಕ ಕಳುಹಿಸಿದ ನಾಮಪತ್ರಗಳು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕೋಲ್ಕತಾ: ಪಶ್ಚಿಮ ಬಂಗಾಳ ಪಂಚಾಯ್ತಿ ಚುನಾವಣೆಗಾಗಿ ಅಭ್ಯರ್ಥಿಗಳು ಇ-ಮೇಲ್ ಮೂಲಕ ಕಳುಹಿಸಿದ ನಾಮಪತ್ರಗಳು ಸಮಂಜಸವಾಗಿದ್ದರೆ ಮಾನ್ಯಮಾಡುವಂತೆ ಕೋಲ್ಕತಾ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ಮಂಗಳವಾರ ಸೂಚಿಸಿದೆ.
ಸಿಪಿಐಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಏಪ್ರಿಲ್ 23, ಮಧ್ಯಾಹ್ನ 3 ಗಂಟೆಯೊಳಗೆ ಇ-ಮೇಲ್ ಮೂಲಕ ಸಲ್ಲಿಸಿದ ಸಮಂಜಸವಾದ ನಾಮಪತ್ರಗಳನ್ನು ಸ್ವೀಕರಿಸುವಂತೆ ಚುನಾವಣಾ ಆಯೋಗಕ್ಕೆ ಆದೇಶಿಸಿದೆ.
ಇ-ಮೇಲ್ ಮೂಲಕ ನಾಮಪತ್ರಗಳನ್ನು ಸ್ವೀಕರಿಸಲು ತಿರಸ್ಕರಿಸಿದ್ದ ಚುನಾವಣಾ ಆಯೋಗ, ಪಶ್ಚಿಮ ಬಂಗಾಳ ಪಂಚಾಯತ್ ಕಾಯ್ದೆಯಲ್ಲಿ ಅದಕ್ಕೆ ಅವಕಾಶ ಇಲ್ಲ ಎಂದು ಹೇಳಿತ್ತು. ಆಯೋಗದ ವಿರುದ್ಧ ಸಿಪಿಐಎಂ ಹೈಕೋರ್ಟ್ ಮೆಟ್ಟಿಲೇರಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com