ಏಕಕಾಲಕ್ಕೆ ಚುನಾವಣೆ: ಮುಂದಿನ ವಾರ ಚುನಾವಣಾ ಆಯೋಗ, ಕಾನೂನು ಆಯೋಗ ಚರ್ಚೆ

ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಸಾಧ್ಯವೆ ಎಂಬುದರ ಕುರಿತ ಚುನಾವಣಾ ಆಯೋಗ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಸಾಧ್ಯವೆ ಎಂಬುದರ ಕುರಿತ ಚುನಾವಣಾ ಆಯೋಗ ಮತ್ತು ಕಾನೂನು ಆಯೋಗ ಮುಂದಿನ ವಾರ ಸುದೀರ್ಘ ಚರ್ಚೆ ನಡೆಸಲಿದೆ.
ಈ ಸಂಬಂಧ ಚುನಾವಣಾ ಆಯೋಗ, ಕಾನೂನು ಆಯೋಗದ ಮುಖ್ಯಸ್ಥ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿಎಸ್ ಚೌವ್ಹಾಣ್ ಮತ್ತು ಇತರೆ ಹಿರಿಯ ಅಧಿಕಾರಿಗಳನ್ನು ಮೇ 16ರಂದು ಚರ್ಚೆಗೆ ಆಹ್ವಾನಿಸಿದೆ.
ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ನಾವು ಚುನಾವಣಾ ಆಯೋಗದೊಂದಿಗೆ ಚರ್ಚಿಸುತ್ತಿದ್ದೇವೆ ಎಂದು ಕಾನೂನ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ವರದಿ ನೀಡುವಂತೆ ಕೇಂದ್ರ ಸರ್ಕಾರ ಕಾನೂನು ಆಯೋಗಕ್ಕೆ ಸೂಚಿಸಿದ ಬೆನ್ನಲ್ಲೇ ಚುನಾವಣಾ ಆಯೋಗ ಚರ್ಚೆಗೆ ಸಭೆ ಕರೆದಿದೆ.
ಆರಂಭದಲ್ಲಿ ಎರಡು ಹಂತಗಳಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಬಹುದು. 2019 ಮತ್ತು 2024ರಲ್ಲಿ ಲೋಕಸಭೆ ಹಾಗೂ ವಿವಿಧ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಸಂವಿಧಾನ ಮತ್ತು ಜನಪ್ರತಿನಿಧಿ ಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಕಾನೂನು ಆಯೋಗ ಹೇಳಿದೆ.
2019ರ ಲೋಕಸಭಾ ಚುನಾವಣೆ ಜತೆಗೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ್ರ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಪ್ರಸ್ತಾಪ ಇದೆ. ಈ ರಾಜ್ಯಗಳಲ್ಲಿ ವಿಧಾನಸಭೆಯ ಅವಧಿ 2021ಕ್ಕೆ ಪೂರ್ಣಗೊಳ್ಳಲಿದ್ದು, ಮುಂಚಿತವಾಗಿ ಚುನಾವಣೆ ನಡೆಸಲು ಅವಧಿ ಮೊಟಕುಗೊಳಿಸಬೇಕಾಗುತ್ತದೆ.
ಎರಡನೇ ಹಂತದಲ್ಲಿ 2024ರ ಲೋಕಸಭಾ ಚುನಾವಣೆ ಜತೆಗೆ ಉತ್ತರ ಪ್ರದೇಶ, ಗುಜರಾತ್, ಕರ್ನಾಟಕ, ದೆಹಲಿ, ಪಂಜಾಬ್‌ಗಳಲ್ಲಿ ಚುನಾವಣೆ ನಡೆಸಲು, ಇಲ್ಲಿನ ವಿಧಾನಸಭೆಗಳ ಅವಧಿ ವಿಸ್ತಾರ ಮಾಡಬೇಕಾಗುತ್ತದೆ. ಇದಕ್ಕಾಗಿ ಸಂವಿಧಾನಕ್ಕೆ ಹಾಗೂ ಜನಪ್ರತಿನಿಧಿ ಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಕಾನೂನು ಆಯೋಗ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com