ಮುಂಬೈ: ದೇಶದಲ್ಲಿರುವ ಪರಿಸ್ಥಿತಿ ಅಧಿಕಾರ ಬದಲಾವಣೆಗೆ ಸೂಕ್ತ ಸಮಯ ಎನ್ನುವುದನ್ನು ಸೂಚಿಸುತ್ತಿದೆ ಎಂದು ಎನ್ ಸಿಪಿ ನಾಯಕ ಶರದ್ ಪವಾರ್ ಹೇಳಿದ್ದಾರೆ.
2019 ರ ಚುನಾವಣೆಯ ಬಗ್ಗೆ ಮಾತನಾಡಿರುವ ಶರದ್ ಪವಾರ್, ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಿರೋಧಪಕ್ಷ ಎಷ್ಟು ಸ್ಥಾನಗಳನ್ನು ಗಳಿಸಲಿದೆ ಎಂಬುದನ್ನು ಈಗಲೇ ಹೇಳುವುದು ಕಷ್ಟ ಎಂದು ಶರದ್ ಪವಾರ್ ಅಭಿಪ್ರಾಯಪಟ್ಟಿದ್ದಾರೆ.
ದೇಶದಲ್ಲಿ ಈಗಿರುವ ಟ್ರೆಂಡ್ ಪ್ರಕಾರ ಅಧಿಕಾರ ಬದಲಾವಣೆಗೆ ಸೂಕ್ತವಾದ ಸಮಯ ಇದೆ. ಆದರೆ ವಿರೋಧ ಪಕ್ಷಕ್ಕೆ ಎಷ್ಟು ಸ್ಥಾನ ಸಿಗಲಿದೆ ಎಂದು ಕೇಳಿದರೆ ಇಂತಿಷ್ಟೇ ಎಂದು ಹೇಳಲು ಸಾಧ್ಯವಿಲ್ಲ ಆದರೆ ಅಧಿಕಾರ ಬದಲಾವಣೆಗೆ ಮಾತ್ರ ಸಕರಾತ್ಮಕವಾದ ವಾತಾವರಣವಿದೆ ಎಂದು ಹೇಳಿದ್ದಾರೆ.
ಬಿಜೆಪಿ ವಿರೋಧಿ ಅಭಿಯಾನದಲ್ಲಿ ಕಾಂಗ್ರೆಸ್ ನ ಪರಿಶ್ರಮ ಸಾಕಷ್ಟಿದೆ ಎಂದು ಶರದ್ ಪವಾರ್ ಹೇಳಿದ್ದು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಎನ್ ಸಿಪಿಯೊಂದಿಗೆ ಕೈ ಜೋಡಿಸಲು ಉತ್ಸುಕರಾಗಿದ್ದಾರೆ ಎಂದು ಹೇಳಿದ್ದಾರೆ.