ಆಧಾರ್ ನ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಆಧಾರ್ ಕಾರ್ಡಿನ ಸಾಂವಿಧಾನಿಕ ಸಿಂಧುತ್ವ ಮತ್ತು ಅದಕ್ಕೆ ಸಂಬಂಧಪಟ್ಟಂತೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಆಧಾರ್ ಕಾರ್ಡಿನ ಸಾಂವಿಧಾನಿಕ ಸಿಂಧುತ್ವ ಮತ್ತು ಅದಕ್ಕೆ ಸಂಬಂಧಪಟ್ಟಂತೆ 2016ನೇ ಸಾಲಿನ ಕಾನೂನನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ, ಸಂಬಂಧಪಟ್ಟ ಎಲ್ಲಾ ಪಕ್ಷಗಳಿಗೆ ಮೊಕದ್ದಮೆ ಹೂಡಲು ಲಿಖಿತ ಸಲ್ಲಿಕೆಗಳನ್ನು ಸಲ್ಲಿಸುವಂತೆ ಸೂಚಿಸಿದೆ.

4 ತಿಂಗಳಲ್ಲಿ 38 ದಿನಗಳ ಕಾಲ ವಿಚಾರಣೆ ನಡೆಸಿದ ಸಂವಿಧಾನ ಪೀಠ ತೀರ್ಪನ್ನು ಇಂದು ಕಾಯ್ದಿರಿಸಿತು. ಕೇಂದ್ರದ ಪರವಾಗಿ ಅಟೊರ್ನಿ ಜನರಲ್ ಕೆ.ಕೆ.ವೇಣುಗೋಪಾಲ್, ಹಿರಿಯ ವಕೀಲರಾದ ಕಪಿಲ್ ಸಿಬಲ್, ಪಿ.ಚಿದಂಬರಂ, ರಾಕೇಶ್ ದ್ವಿವೇದಿ, ಶ್ಯಾಮ್ ದಿವಾನ್, ಅರವಿಂದ್ ದಾತಾರ್ ಅವರು ವಿವಿಧ ಪಕ್ಷಗಳ ಪರವಾಗಿ ವಾದ ಮಂಡಿಸಿದರು.

ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ, ಎ.ಎಮ್.ಖನ್ವಿಲ್ಕರ್, ಡಿ.ವೈ.ಚಂದ್ರಚೂಡ್ ಮತ್ತು ಅಶೋಕ್ ಭೂಷಣ್ ಕೂಡ ಇದ್ದಾರೆ.

ನಾಲ್ಕು ತಿಂಗಳ ಕಾಲ ನಡೆದ ವಿಚಾರಣೆಯಲ್ಲಿ, ಆಧಾರ್ ಸಂಖ್ಯೆಯನ್ನು ಮೊಬೈಲ್ ಸಂಖ್ಯೆಯೊಂದಿಗೆ ಜೋಡಿಸುವ ಕುರಿತು ತನ್ನ ನಿರ್ಧಾರವನ್ನು ಬಲಯುತವಾಗಿ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ, ಆಧಾರ್ ಜೊತೆ ಮೊಬೈಲ್ ಸಂಖ್ಯೆ ಜೋಡಿಸುವ ಕಾರ್ಯ ಮಾಡದಿದ್ದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿದೆ.

ಸರ್ಕಾರ ನ್ಯಾಯಾಲಯದ ಆದೇಶವನ್ನು ತಪ್ಪಾಗಿ ಅರ್ಥೈಸಿಕೊಂಡು ಮೊಬೈಲ್ ಸಂಖ್ಯೆ ಜೊತೆ ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಲು ಅಸ್ತ್ರವಾಗಿ ಬಳಸಿಕೊಂಡಿದೆ ಎಂದು ಸಂವಿಧಾನ ಪೀಠ ಹೇಳಿದೆ.

ಆಧಾರ್ ಸಂಖ್ಯೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಕೆ.ಎಸ್.ಪುಟ್ಟಸ್ವಾಮಿ ಮತ್ತು ಇತರರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com